ನಾಪೋಕ್ಲು, ಮಾ. ೨೭: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದ ಬೆಟ್ಟ ಶ್ರೇಣಿಯಲ್ಲಿ ಮಂಗಳವಾರ ಕಾಣಿಸಿಕೊಂಡ ಬೆಂಕಿ ವ್ಯಾಪಕವಾಗಿ ಹಬ್ಬಿದೆ. ಮರ ಗಿಡಗಳು ಸೇರಿದಂತೆ ನೂರು ಎಕರೆಗೂ ಅಧಿಕ ಕಾಡು ಭಸ್ಮವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರಳಿದ್ದು ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಬೆಂಕಿ ವ್ಯಾಪಕವಾಗಿ ಹಬ್ಬಿದ್ದು ಇನ್ನೂ ಹತೋಟಿಗೆ ಬಂದಿಲ್ಲ ಎನ್ನಲಾಗುತ್ತಿದೆ.

ಬಿಸಿಲಿನ ಝಳ ಹೆಚ್ಚುತಿದ್ದು ಅಲ್ಲಲ್ಲಿ ಬೆಂಕಿ ಆಕಸ್ಮಿಕಗಳು ಸಂಭವಿಸುತ್ತಿವೆ. ಬೆಟ್ಟ ಶ್ರೇಣಿಗೆ ರಸ್ತೆ ಸೌಲಭ್ಯ ಇಲ್ಲದೆ ಇರುವುದರಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ.