ಕುಶಾಲನಗರ, ಮಾ. ೨೮: ಕೊಡಗು ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರೊಂದಿಗೆ ಕಾಂಗ್ರೆಸ್ ಸಂಸದರು ಕೂಡ ಜೊತೆಯಾದಲ್ಲಿ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲು ಅನುಕೂಲ ವಾಗಲಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದು ಸ್ವಾಗತಾರ್ಹ. ಇದರಿಂದ ಪಕ್ಷ ಮತ್ತಷ್ಟು ಬಲಿಷ್ಠವಾಗಲಿದೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರು, ಮುಖಂಡರು ಪಕ್ಷದಿಂದ ಹೊರ ಹೋಗಲು ಅವಕಾಶ ನೀಡುವುದಿಲ್ಲ.
ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಕಾರ್ಯೋನ್ಮುಖ ರಾಗಬೇಕಿದೆ. ಜಿಲ್ಲೆಗೆ ರೈಲು ಮಾರ್ಗ ತರುವ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಅಗತ್ಯವಿದೆ ಎಂದರು. ಜಿಲ್ಲೆಗೆ ಈಗಾಗಲೇ ಇಬ್ಬರು ಶಾಸಕರ ಮೂಲಕ ೫೦೦ ಕೋಟಿ ಗಳಷ್ಟು ಅನುದಾನ ಒದಗಿ ಬಂದಿದೆ ಎಂದು ತಿಳಿಸಿದರು.
ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಸಮಸ್ಯೆಗಳಿದ್ದಲ್ಲಿ ಪಕ್ಷದೊಳಗಡೆ ಅದನ್ನು ಬಗೆಹರಿಸುವ ಪ್ರಯತ್ನ ಮಾಡಬೇಕಿದೆ. ಮುಕ್ತ ಮನಸ್ಸಿನಿಂದ ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಂಡಾಗ ಸ್ಥಾನ ಮಾನಗಳು ಅರಸಿ ಬರಲಿವೆ. ಸರಕಾ ರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ಮನೆಮನೆಗೆ ತಿಳಿಸುವ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರ ಸಹಕಾರ ಅಗತ್ಯ ಎಂದರು. ಕೊಡಗು-ಮೈಸೂರು ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷö್ಮಣ್ ಗೌಡ ಮಾತನಾಡಿ, ಪಕ್ಷಕ್ಕಾಗಿ ದುಡಿದ ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಗುರು ತಿಸಿ ಪಕ್ಷ ಟಿಕೆಟ್ ನೀಡಿದೆ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು ಇಡೀ ದೇಶ ಕಾಂಗ್ರೆಸ್ ಮಯವಾಗಲಿದೆ. ಕಾಂಗ್ರೆಸ್ ಪಕ್ಷದ ಬದ್ಧತೆ, ಸಿದ್ಧಾಂತಕ್ಕೆ ಮನಸೋತು ಬೃಹತ್ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿದರು. ಇದೇ ಸಂದರ್ಭ ಹಲವು ಯುವಕರು ಕಾಂಗ್ರೆಸ್ ಸೇರ್ಪಡೆಯಾ ದರು. ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡು ರಾವ್, ನಟೇಶ್ ಗೌಡ, ವಿವಿಧ ಘಟಕಗಳ ಪದಾಧಿಕಾರಿಗಳಾದ ಶೇಖ್ ಖಲೀಮುಲ್ಲಾ, ಟಿ.ಪಿ.ಹಮೀದ್, ಜೋಸೆಫ್ ವಿಕ್ಟರ್ ಸೋನ್ಸ್, ಶಿವಶಂಕರ್, ಕಿರಣ್ ಕುಮಾರ್, ಎಂ.ಕೆ.ದಿನೇಶ್, ಕೆ.ಕೆ.ಮಂಜು ನಾಥ್ ಕುಮಾರ್ ಮತ್ತಿತರರು ಇದ್ದರು.