ಕುಶಾಲನಗರ, ಮಾ. ೨೮: ಕುಶಾಲನಗರದ ರಥ ಬೀದಿಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಯೊಬ್ಬರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದು ಅವರ ಅಂತ್ಯ ಸಂಸ್ಕಾರದ ಬೆನ್ನಲ್ಲೇ ಪತ್ನಿ ಕೂಡ ತೀವ್ರ ಹೃದಯಾಘಾತದಿಂದ ನಿಧನರಾದ ದಾರುಣ ಘಟನೆ ನಡೆದಿದೆ.
ಮೂಲತಃ ಎಚ್ ಡಿ ಕೋಟೆ ನಿವಾಸಿ ಕುಶಾಲನಗರ ರಥ ಬೀದಿಯಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಹೆಚ್ ಪಿ ಮಂಜುನಾಥ (೬೩) ಹೃದಯಾಘಾತದಿಂದ ಬೆಳಿಗ್ಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಕುಶಾಲನಗರ ರುದ್ರ ಭೂಮಿಯಲ್ಲಿ ಮಧ್ಯಾಹ್ನ ವೇಳೆ ನಡೆದಿತ್ತು.
ಈ ಘಟನೆಯಿಂದ ತೀವ್ರ ನೊಂದಿದ್ದ ಅವರ ಪತ್ನಿ ನೀಲಾವತಿ (೫೭) ಪತಿಯ ಅಗಲಿಕೆಯ ಕೆಲವೇ ಗಂಟೆಗಳ ಅಂತರದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಶಾಲನಗರ ಸರಕಾರಿ ಆಸ್ಪತ್ರೆಗೆ ದಾಖಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಕುಶಾಲನಗರದ ವೆಂಕಟೇಶ್ವರ ಬಡಾವಣೆಯಲ್ಲಿ ನೆಲೆಸಿದ್ದರು. ಇಬ್ಬರು ಹೆಣ್ಣು ಮಕ್ಕಳು ಓರ್ವ ಪುತ್ರನನ್ನು ಅಗಲಿದ್ದಾರೆ.