ವೀರಾಜಪೇಟೆ, ಮಾ. ೨೮: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವೀರಾಜಪೇಟೆಯ ಐ.ಕ್ಯೂ.ಎ.ಸಿ, ರಾಜ್ಯಶಾಸ್ತç ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿಯ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರಾದ ನಿರ್ಮಲ ಹೆಚ್.ಪಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಇಂದಿನ ಯುವ ಸಮುದಾಯವು ಮತದಾನವನ್ನು ಕೇವಲ ಹಕ್ಕು ಎಂದು ಪರಿಗಣಿಸದೆ ದೇಶದ ಜವಾಬ್ದಾರಿಯುತ ನಾಗರಿಕನಾಗಿ ಮತದಾನ ನನ್ನ ಕರ್ತವ್ಯವೆಂದು ಭಾವಿಸಿ ಸದೃಢ ಭಾರತವನ್ನು ನಿರ್ಮಿಸುವಲ್ಲಿ ವಿವೇಚನೆಯಿಂದ ನಮ್ಮ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕೆಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ ದಯಾನಂದ ಮಾತನಾಡಿ ವಿದ್ಯಾವಂತ ಯುವಜನತೆಯು ಮತದಾನದಂತಹ ರಾಜಕೀಯ ಚಟುವಟಿಕೆಗಳನ್ನು ಅಸಡ್ಡೆಯಿಂದ ಕಾಣುತ್ತಿದ್ದು, ಇದು ನಮ್ಮ ದೇಶದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಯುವಜನತೆಯು ಹೆಚ್ಚು ಪರಿಣಾಮಕಾರಿಯಾಗಿ ಈ ಕುರಿತು ಆಲೋಚಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ ಮಾಡುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ನಾಂದಿ ಹಾಡಲು ಮುಂದಾಗಬೇಕೆAದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಚುನಾವಣಾ ಸಾಕ್ಷರತಾ ಸಮಿತಿಯ ಕ್ಯಾಂಪಸ್ ರಾಯಭಾರಿ ತೃತೀಯ ಬಿ.ಕಾಂ.ನ ಸಚಿನ್ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಪ್ರಥಮ ಬಿ.ಎ. ವಿದ್ಯಾರ್ಥಿ ಕೀರ್ತನಾ ಮತದಾನ ಜಾಗೃತಿ ಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥರಾದ ದಿವ್ಯ. ಆರ್ ಮತ್ತು ಚುನಾವಣಾ ಸಾಕ್ಷರತಾ ರಾಜ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯ ಎಂ.ಬಿ. ಉಪಸ್ಥಿತರಿದ್ದರು.