ಮಡಿಕೇರಿ, ಮಾ. ೨೮: ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ದಕ್ಷಿಣ ಕನ್ನಡದ ಸುಬ್ರಹ್ಮಣ್ಯಕ್ಕೆ ಹತ್ತಿರವಿರುವ ಕೂಜಿಮಲೆ ಬಳಿ ಕೆಲ ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡ ಬೆನ್ನಲ್ಲೆ ಇದೀಗ ಅದೇ ವ್ಯಾಪ್ತಿಯ ತೋಟವೊಂದರಲ್ಲಿ ಅಪರಿಚಿತ ಮಹಿಳೆಯೋರ್ವಳು ಪತ್ತೆಯಾಗಿದ್ದು, ಆಕೆ ನಕ್ಸಲ್ ಎಂದು ಶಂಕೆ ವ್ಯಕ್ತಪಡಿಸಿ ಸ್ಥಳೀಯರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎಸ್.ಪಿ ರಾಮರಾಜನ್ ನಕ್ಸಲ್ ನಿಗ್ರಹ ದಳ ಕೊಡಗು ಜಿಲ್ಲಾ ಸಶಸ್ತç ಪಡೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ಮಾನಸಿಕವಾಗಿ ಅಸ್ವಸ್ಥೆ ಎಂದು ತಿಳಿದು ಬಂದಿದೆ. ಹಿಂದಿಯಲ್ಲಿ ಮಾತನಾಡುತ್ತಿರುವ ಆಕೆ ರಾಜಸ್ಥಾನ ಮೂಲದವಳು ಎಂದು ತಿಳಿಸಿದ್ದಾಳೆ. ಸ್ಥಳಕ್ಕೆ ತಾನೂ ಕೂಡ ಭೇಟಿ ನೀಡಿದ್ದು, ಮಧ್ಯರಾತ್ರಿ ೨ ಗಂಟೆಯವರೆಗೂ ಕೂಜಿಮಲೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸಿದೆ. ಸದ್ಯಕ್ಕೆ ಮಹಿಳೆಯು ಮಡಿಕೇರಿ ಗ್ರಾಮಾಂತರ ಠಾಣೆಯ ಕಸ್ಟಡಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಆಶ್ರಮಕ್ಕೆ ಸೇರಿಸಲಾಗುವುದು ಎಂದು ಎಸ್.ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಕೂಜಿಮಲೆ ವ್ಯಾಪ್ತಿಯಲ್ಲಿ ೪ ನಕ್ಸಲರು ಅಲ್ಲಿನ ಅಂಗಡಿಯೊAದಕ್ಕೆ ತೆರಳಿ ದಿನಸಿ ಸಾಮಾಗ್ರಿಗಳನ್ನು ಖರೀದಿಸಿದ್ದರು. ಈ ಬಗ್ಗೆ ಮಾಹಿತಿ ತಿಳಿದೊಡನೆ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಸ್ಥಳದಲ್ಲಿ ಡ್ರೋನ್ ಮೂಲಕ ನಕ್ಸಲರ ಪತ್ತೆಗೆ ಕೂಂಬಿAಗ್ ಕಾರ್ಯ ಚುರುಕುಗೊಳಿಸಿ ತನಿಖೆ ಕೈಗೊಳ್ಳಲಾಗಿತ್ತು. ಈ ಮಧ್ಯೆ ತಾ.೨೪ ರಂದು ಕುಕ್ಕೆ ಸುಬ್ರಹ್ಮಣ್ಯದ ಐನೆಕಿದು ಗ್ರಾಮದಲ್ಲಿಯೂ ನಕ್ಸಲರು ಕಾಣಿಸಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಪ್ರಕರಣ ದಾಖಲಿಸಿದ್ದರು.