ಕೂಡಿಗೆ, ಮಾ. ೨೮: ಕಾವೇರಿ ನೀರಾವರಿ ನಿಗಮದ ವತಿಯಿಂದ ಹಾರಂಗಿ ಅಣೆಕಟ್ಟೆಯ ಹಿಂಭಾಗದಲ್ಲಿ ನಡೆಯುತ್ತಿರುವ ಹೂಳೆತ್ತುವಿಕೆ ತಡೆಗೋಡೆ, ಕಿರು ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮತ್ತು ಅಣೆಕಟ್ಟೆಯ ಸಮೀಪದಿಂದ ೬ನೇ ತೂಬಿನವರೆಗೆ ನಡೆಯುತ್ತಿರುವ ರೂ. ೪೯ ಕೋಟಿ ವೆಚ್ಚದ ಮುಖ್ಯ ನಾಲೆಯ ದುರಸ್ತಿ ಕಾರ್ಯವನ್ನು ಮೈಸೂರು ವಿಭಾಗದ ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ತಂಡ ಪರಿಶೀಲನೆ ನಡೆಸಿತು.

ಕಾವೇರಿ ನೀರಾವರಿ ನಿಗಮದ ಮೈಸೂರು ವಿಭಾಗದ ಮುಖ್ಯ ಇಂಜಿನಿಯರ್ ವೆಂಕಟೇಶ್, ಕುಶಾಲನಗರ ಹಾರಂಗಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ಕೆ.ಕೆ.ರಘುಪತಿ, ಸಹಾಯಕ ಅಭಿಯಂತರ ದೇವೇಗೌಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ, ಇಂಜಿನಿಯರ್ ಸೌಮ್ಯ, ಸಿದ್ದರಾಜ್ ಸೇರಿದಂತೆ ಸಿಬ್ಬಂದಿ ವರ್ಗದವರು ಎರಡೂ ಕಡೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರನಿಗೆ ಸೂಚನೆ ನೀಡುವ ಮೂಲಕ ಪರಿಶೀಲನೆ ನಡೆಸಿದರು.