*ಗೋಣಿಕೊಪ್ಪ, ಏ. ೨: ಬೇಸಿಗೆಯಲ್ಲಿ ದಾಹÀ ನೀಗಿಸುವ ಉದ್ದೇಶಕ್ಕಾಗಿ ತಂಪು ಪಾನೀಯಗಳನ್ನು ಹೆಚ್ಚಾಗಿ ಬಳಸುವುದು ಆರೋಗ್ಯಕ್ಕೆ ಹಾನಿಕರ ಎಂದು ಗ್ರಾ.ಪಂ ಸದಸ್ಯೆ ನೂರೇರ ರತಿ ಅಚ್ಚಪ್ಪ ಹೇಳಿದರು.

ಗೋಣಿಕೊಪ್ಪ ಗ್ರಾಮ ವ್ಯಾಪ್ತಿಯ ಕಾವೇರಿ ಹಿಲ್ಸ್ ಬಡಾವಣೆಯ ಕೆಇಬಿ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಹೆಚ್ಚಾಗಿ ನೀರು, ಮಜ್ಜಿಗೆ, ಮೊಸರು, ಎಳನೀರು ಸೇವನೆಯಿಂದ ಬೇಸಿಗೆಯಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.

ಬೇಸಿಗೆಯಲ್ಲಿ ಗರ್ಭಿಣಿಯರು, ಬಾಣಂತಿಯರು ಆರೋಗ್ಯದ ಬಗ್ಗೆ ಗಮನ ಹರಿಸಬೇಕೆಂದರು. ಅಂಗನವಾಡಿ ಕಾರ್ಯಕರ್ತೆ ಆರೀಫ ಬಾನು, ಸಹಾಯಕಿ ಜ್ಯೋತಿ ಇದ್ದರು.