ಕೂಡಿಗೆ, ಏ. ೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಡಹಳ್ಳಿ ಗ್ರಾಮದಲ್ಲಿರುವ ಶ್ರೀ ಹರಕೆ ಚೌಡೇಶ್ವರಿ ದೇವಿ, ನಾಗದೇವರ ವಾರ್ಷಿಕೋತ್ಸವ ತಾ. ೫ ರಂದು (ಇಂದು) ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ, ದುರ್ಗಾಹೋಮ, ಕಲಾವೃದ್ಧಿ ಹೋಮ, ಅಭಿಷೇಕ, ಕಲಶ ಪ್ರತಿಷ್ಠೆ ಹಾಗೂ ದೇವಿಗೆ ವಿವಿಧ ಅಭಿಷೇಕ ನಡೆಯಲಿವೆ. ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾತಿ, ಪ್ರಸಾದ ವಿನಿಯೋಗ ನಂತರ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ೭ ಗಂಟೆಗೆ ದೇವಾಲಯದ ಆವರಣದಲ್ಲಿ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.