ಚುನಾವಣಾ ವೆಚ್ಚದ ಮೇಲೆ ಕಣ್ಗಾವಲಿಡಲು ವಿಶೇಷ ಅಧಿಕಾರಿ ನೇಮಕ
ಬೆಂಗಳೂರು, ಏ. ೩: ಚುನಾವಣಾ ವೆಚ್ಚ ಮೇಲೆ ಕಣ್ಗಾವಲಿಡಲು ಭಾರತೀಯ ಕಂದಾಯ ಸೇವೆ ಅಧಿಕಾರಿ ಬಿ. ಮುರಳಿ ಕುಮಾರ್ ಅವರನ್ನು ವಿಶೇಷ ಅಧಿಕಾರಿಯಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ನೇಮಕ ಮಾಡಿದೆ. ಅಸ್ತಿತ್ವದಲ್ಲಿರುವ ಚುನಾವಣಾ ವೆಚ್ಚದ ಮೇಲ್ವಿಚಾರಣೆಯನ್ನು ಬಲಪಡಿಸಲು ವೀಕ್ಷಕರನ್ನು ನೇಮಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಕರ್ನಾಟಕವಷ್ಟೇ ಅಲ್ಲದೆ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಿಗೂ ವಿಶೇಷ ಅಧಿಕಾರಿಯನ್ನು ನೇಮಿಸಲಾಗಿದೆ. ೨೦೧೯ಕ್ಕೆ ಹೋಲಿಸಿದರೆ ೨೦೨೪ ರ ಲೋಕಸಭೆ ಚುನಾವಣೆಗೆ ಚುನಾವಣಾ ನೀತಿ ಸಂಹಿತೆ (ಒಅಅ) ಜಾರಿಯಾದ ಕೇವಲ ೧೦ ದಿನಗಳಲ್ಲಿ ವಶಪಡಿಸಿಕೊಳ್ಳುವುತ್ತಿರುವುದು ಶೇ. ೧೧೦.೧೨ರಷ್ಟು ಹೆಚ್ಚಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಮಾಹಿತಿ ನೀಡಿದೆ. ಮಾರ್ಚ್ ೧೬, ೨೦೨೪ ರಿಂದ ಮಾರ್ಚ್ ೨೭, ೨೦೨೪ ರವರೆಗೆ ೫೫.೭೬ ಕೋಟಿ ರೂ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ಆರು ತಿಂಗಳ ಹಿಂದೆ ಎಂಸಿಸಿ, ಪೊಲೀಸರು, ಆದಾಯ ತೆರಿಗೆ, ಅಬಕಾರಿ, ವಾಣಿಜ್ಯ ತೆರಿಗೆ, ಮಾದಕ ದ್ರವ್ಯ ನಿಯಂತ್ರಣ ಡ್ಯೂರೋ ಮತ್ತು ಡಿಆರ್ಐ ೫೩೭.೫೧ ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ ೨, ೨೦೨೪ ರವರೆಗೆ ೮೧,೧೦,೨೬,೨೫೬ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆAದು ತಿಳಿದುಬಂದಿದೆ. ವಿಶೇಷ ಅಧಿಕಾರಿಗಳ ನಿಯೋಜನೆ ಅಸಾಮಾನ್ಯವಾದುದಲ್ಲ. ವಶಪಡಿಸಿಕೊಂಡ ವಸ್ತುಗಳ ವರದಿ ಹಾಗೂ ಅವುಗಳ ಮೇಲೆ ನಿಗಾ ಇಡಲು ಈ ರೀತಿಯ ನಿಯೇಜನೆ ಸಾಮಾನ್ಯವಾಗಿರುತ್ತದೆ. ವಿಶೇಷ ಅಧಿಕಾರಿಯ ನೇಮಕ ಉತ್ತಮ ಸಮನ್ವಯ ಮತ್ತು ಸುಧಾರಿತ ಸಂವಹನಕ್ಕೆ ಸಹಾಯ ಮಾಡುತ್ತದೆ. ಇಲ್ಲಿಯವರೆಗೆ ನಾವು ಸಭೆ ನಡೆಸಿಲ್ಲ. ಅಧಿಕಾರಿಗಳು ಬಂದ ನಂತರ ಸಭೆ ನಡೆಸಿ ಎಲ್ಲ ಒತ್ತುವರಿ ವಿವರ ನೀಡಲಾಗುವುದು. ಮತದಾನದ ದಿನಾಂಕಗಳು ಸಮೀಪಿಸುತ್ತಿದ್ದು, ತಪಾಸಣೆಯನ್ನು ತೀವ್ರಗೊಳಿಸುತ್ತಿದ್ದೇವೆ. ಎಲ್ಲಾ ತಂಡಗಳು ಕಣ್ಗಾವಲನ್ನು ಹೆಚ್ಚಿಸಿದ್ದು, ಬ್ಯಾಂಕ್ ವಹಿವಾಟಿನ ವಿವರಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾತ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದ ೨ ವರ್ಷದ ಮೊಮ್ಮಗ
ವಿಜಯಪುರ, ಏ. ೩: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ಕೊರೆಸಿದ್ದ ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದಿರುವ ಘಟನೆ ನಡೆದಿದೆ. ನಿನ್ನೆ ಕೊಳವೆ ಬಾವಿಯನ್ನು ಕೊರೆಸಲಾಗಿತ್ತು. ಆದರೆ ನೀರು ಬರದ ಹಿನ್ನೆಲೆಯಲ್ಲಿ ಅದನ್ನು ಹಾಗೆ ಬಿಡಲಾಗಿತ್ತು. ಶಂಕರಪ್ಪ ಎಂಬವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. ಇಂದು ಆಟವಾಡಲು ಹೋಗಿದ್ದ ವೇಳೆ ಶಂಕರಪ್ಪ ಅವರ ಮೊಮ್ಮಗ ಸ್ವಾತಿಕ್ ಆಯತಪ್ಪಿ ಬೋರ್ವೆಲ್ಗೆ ಬಿದ್ದಿದ್ದಾನೆ. ಸಾತ್ವಿಕ್ ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಸಹಾಯಕ ಕಮಿಷನರ್ ಅಬಿದ್ ಗದ್ಯಾಲ್ ಅವರು, ಸಂಜೆ ೬ ಗಂಟೆ ಸುಮಾರಿಗೆ ಬಾಲಕ ಬಿದ್ದಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಕಂದಾಯ ಅಧಿಕಾರಿಗಳು, ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಸಿಬ್ಬಂದಿಯ ತಂಡವನ್ನು ರವಾನಿಸಿದ್ದೇವೆ. ವೈದ್ಯರು ಆಮ್ಲಜನಕದ ಪೂರೈಕೆಯನ್ನೂ ಮಾಡುತ್ತಿದ್ದಾರೆ. ಇದಲ್ಲದೇ, ಈಗಾಗಲೇ ಜೆಸಿಬಿಗಳು ಸಮಾನಾಂತರವಾಗಿ ಅಗೆಯುವ ಕೆಲಸ ಆರಂಭಿಸಲಾಗಿದೆ ಎಂದರು. ಪ್ರಾಥಮಿಕ ವರದಿಯ ಪ್ರಕಾರ, ಬಾಲಕ ಸುಮಾರು ೨೦ ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಾನೆ ಎಂದು ಗದ್ಯಾಲ್ ಹೇಳಿದ್ದಾರೆ. ಬಾಲಕನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
ಕೇಜ್ರಿವಾಲ್ ಬಂಧನ : ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ನವದೆಹಲಿ, ಏ. ೩: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟಿçÃಯ ಸಂಚಾಲಕ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ೧೫ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು "ಕಿಂಗ್ಪಿನ್" ಎಂದು ಇಡಿ ಆರೋಪಿಸಿದ್ದು, ಎಎಪಿ ನಾಯಕ "ತಪ್ಪಿಸಿಕೊಳ್ಳುವ ಉತ್ತರ" ನೀಡಿದ್ದಾರೆ ಮತ್ತು ತನಿಖೆಗೆ ಸಂಬAಧಿಸಿದ ಮಾಹಿತಿಯನ್ನು ಮರೆಮಾಚುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ ೨೧ ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆರೋಪಿ ದೆಹಲಿ ಸಿಎಂ ಅನ್ನು ಮಾರ್ಚ್ ೨೮ ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದ್ದರು. ನಂತರ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ ೧ ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು. ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಹೇಳಿತ್ತು. ಕಸ್ಟಡಿ ಅವಧಿಯಲ್ಲಿ ಇತರ ಮೂವರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.