ಕಣಿವೆ, ಏ. ೪: ಕೊಡಗು ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರಿಗೆ ೨೦೨೪ರ ಮಂತ್ರಾಲಯದ ಪ್ರತಿಷ್ಠಿತ ಪರಿಮಳ ಪ್ರಶಸ್ತಿ ಒಲಿದು ಬಂದಿದೆ.

ಸ್ಪೇಸ್ ಮೀಡಿಯಾದ ಗುರುದತ್ತ ಕುಲಕರ್ಣಿ ಸಹಯೋಗದೊಂದಿಗೆ ಮರಳಿ ಸಂಸ್ಕೃತಿಗೆ ಇವರ ಸಹ ಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಸುಸಂದರ್ಭದಲ್ಲಿ ಶ್ರೀ ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ ನೀಡುವ ಮಂತ್ರಾಲಯ ಪರಿಮಳ ಪ್ರಶಸ್ತಿ ಪ್ರೊ. ಅಶೋಕ ಸಂಗಪ್ಪ ಆಲೂರ ಇವರಿಗೆ ಸಂದಿದೆ. ಕೃಷಿ, ತೋಟಗಾರಿಕೆ, ಉನ್ನತ ಶಿಕ್ಷಣ, ನೈಸರ್ಗಿಕ ಸಂಪನ್ಮೂಲ ನಿರ್ವ ಹಣೆಯಲ್ಲಿ ಸುಮಾರು ೨೫ ವರ್ಷಗಳ ಅನುಭವವನ್ನು ಹೊಂದಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯವರು. ಧಾರವಾಡದ ಕೃಷಿ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ. ಪದವಿಯನ್ನು ಪಡೆದಿರುವ ಇವರು ಮಣ್ಣು ಆರೋಗ್ಯ, ಜಲಾಯನ ಅಭಿವೃದ್ಧಿ, ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಅಂರ‍್ರಾಷ್ಟಿçÃಯ ಸಹಕಾರ, ಆಹಾರ ಭದ್ರತೆ, ಸಾಂಸ್ಥಿಕ ಅಭಿವೃದ್ಧಿ, ವಾಣಿಜ್ಯೋದ್ಯಮ ಅಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ರೈತ ಉತ್ಪಾದಕ ಸಂಘಗಳ ಸ್ಥಾಪನೆ, ಅಭಿವೃದ್ಧಿ ಹಾಗೂ ನೀತಿ-ನಿಯಮ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.