ಸೋಮವಾರಪೇಟೆ, ಏ. ೪: ಸಮೀಪದ ನೆರುಗಳಲೆ ಸರ್ಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಶಾರದಾ ಪೂಜೆ ಸಮಾರಂಭ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳನ್ನು ಗ್ರಾಮದ ಪ್ರಮುಖರಾದ ಲಲಿತಾ ಅವರು ಕೊಡುಗೆಯಾಗಿ ನೀಡಿದರು. ಶಾಲೆಯ ೮ ಹಾಗೂ ೯ನೇ ತರಗತಿ ವಿದ್ಯಾರ್ಥಿಗಳಿಗೆ ಅಪ್ಪು ಅಭಿಮಾನಿಗಳ ಸಂಘದ ಅಧ್ಯಕ್ಷ ರವಿಕುಮಾರ್ ಅವರು ಗುರುತಿನ ಚೀಟಿಯನ್ನು ಉಚಿತವಾಗಿ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಮಾತನಾಡಿ, ಪರೀಕ್ಷೆ ಬಗ್ಗೆ ಭಯಪಡದೇ ಸಂತಸದಿAದ ಪರೀಕ್ಷೆ ಎದುರಿಸಬೇಕು ಎಂದರು. ಎಸ್.ಡಿ.ಎಂ.ಸಿ. ಅಧ್ಯಕ್ಷೆ ಪದ್ಮಾವತಿ, ಗ್ರಾ.ಪಂ. ಸದಸ್ಯೆ ಪುಷ್ಪಾ, ವಿನಯ್ ಸಂಭ್ರಮ್, ಅಜಿತ್ ಕುಮಾರ್ ಹಾಗೂ ಗ್ರಾ.ಪಂ. ಮಾಜಿ ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ, ಪೋಷಕರ ಸಮಿತಿ ಅಧ್ಯಕ್ಷ ರಾಜಣ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಶೈಲಾ, ಬೋಜೇಗೌಡ, ಶಾಲಾ ಮುಖ್ಯ ಶಿಕ್ಷಕರಾದ ರಾಜೇಶ್ವರಿ, ಶಿಕ್ಷಕರಾದ ಉಮೇಶ್, ರತ್ನಕುಮಾರ್, ಸುನೀತ, ತೇಜಾಕ್ಷಿ ಸರೋಜ, ರತೀಶ್, ರುತೇಶ್ ಹಾಗೂ ಅರ್ಪಿತ ರೈ ಭಾಗವಹಿಸಿದ್ದರು. ಈ ಸಂದರ್ಭ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕತ್ಯರ್ವ ನಿರ್ವಹಿಸಿ ವರ್ಗಾವಣೆಗೊಂಡ ಶಿಕ್ಷಕಿ ಚಂದ್ರಾವತಿ ಅವರನ್ನು ಶಾಲಾಭಿವೃದ್ಧಿ ಸಮಿತಿ, ಪೋಷಕರು, ಶಿಕ್ಷಕ ವರ್ಗದವರು ಸನ್ಮಾನಿಸಿ ಬೀಳ್ಕೊಟ್ಟರು.