ಕಾಂಗ್ರೆಸ್‌ನಿAದ ನ್ಯಾಯಪತ್ರ ಬಿಡುಗಡೆ

ನವದೆಹಲಿ, ಏ. ೫: ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನೊಳಗೊAಡ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ‘ನ್ಯಾಯ ಪತ್ರ'ವನ್ನು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು. ಕಾಂಗ್ರೆಸ್ ಪಕ್ಷ ಇಂದು ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯನ್ನು ‘ನ್ಯಾಯಪತ್ರ' ಎಂದು ಕರೆದಿದೆ. ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರA ಹಾಗೂ ವೇಣುಗೋಪಾಲ್ ಉಪಸ್ಥಿತರಿದ್ದರು. ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಕಳೆದೊಂದು ದಶಕದಲ್ಲಿನ ಮೋದಿ ಸರ್ಕಾರದ ಆಡಳಿತ ಶೈಲಿಯನ್ನು ಆಮೂಲಾಗ್ರವಾಗಿ ಬದಲಾಯಿಸಲು ಪಣತೊಡಲಾಗಿದ್ದು, ಈ ಅವಕಾಶವನ್ನು ಹಾಲಿ ಸಾರ್ವತ್ರಿಕ ಚುನಾವಣೆ ನೀಡಿದೆ. ಧರ್ಮ, ಭಾಷೆ, ಜಾತಿಯನ್ನು ಮೀರಿ ನೋಡಲು ಜನರಿಗೆ ಮನವಿ ಮಾಡಲಾಗಿದ್ದು, ಬುದ್ಧಿವಂತಿಕೆಯಿAದ ಆಯ್ಕೆ ಮಾಡಿ ಮತ್ತು ಪ್ರಜಾಪ್ರಭುತ್ವ ಸರ್ಕಾರವನ್ನು ಸ್ಥಾಪಿಸಿ ಎಂದು ಕಾಂಗ್ರೆಸ್ ಮತದಾರರಿಗೆ ಮನವಿ ಮಾಡಿದೆ.

ಚುನಾವಣಾ ಆಯೋಗದ ವಿರುದ್ಧ ಎಎಪಿ ನಾಯಕಿ ಆಕ್ರೋಶ

ನವದೆಹಲಿ, ಏ. ೫: ಚುನಾವಣಾ ಆಯೋಗ ಬಿಜೆಪಿ ಅಂಗಸAಸ್ಥೆಯೇ ಎಂದು ದೆಹಲಿ ಸಚಿವರಾದ ಹಿರಿಯ ಎಎಪಿ ನಾಯಕಿ ಅತಿಶಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಕ್ಷ ಸೇರುವಂತೆ ಬಿಜೆಪಿ ತನ್ನನ್ನು ಸಂಪರ್ಕಿಸಿದೆ ಅಥವಾ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಸಿದ್ಧರಾಗಿರಿ ಎಂಬ ಟೀಕೆಗಳ ಕುರಿತು ನೋಟೀಸ್ ನೀಡಿದ ಬೆನ್ನಲ್ಲೇ, ಅತಿಶಿ ಈ ರೀತಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ತನಗೆ ಇಮೇಲ್ ಮೂಲಕ ನೋಟೀಸ್ ಕಳುಹಿಸುವ ಒಂದು ಗಂಟೆ ಮುನ್ನಾ ಬಿಜೆಪಿಯಿಂದ ಮಾಧ್ಯಮಗಳಿಗೆ ಸೋರಿಕೆಯಾಗಿದೆ ಎಂದು ಆರೋಪಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಮತ್ತು ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ನಂತರ ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಚುನಾವಣಾ ಆಯೋಗ ಏಕೆ ನೋಟೀಸ್ ನೀಡಲಿಲ್ಲ ಎಂದು ಕೇಳಿದ ಅವರು, ಚುನಾವಣಾ ಆಯೋಗ ಬಿಜೆಪಿಯ ಅಧೀನ ಸಂಸ್ಥೆಯೇ ಎಂದು ಪ್ರಶ್ನಿಸಿದರು. ಬಿಜೆಪಿಯ "ಆಕ್ಷೇಪಾರ್ಹ" ಹೋರ್ಡಿಂಗ್‌ಗಳು ಮತ್ತು ಪೋಸ್ಟರ್‌ಗಳ ಬಗ್ಗೆ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಸಮಿತಿಗೆ ಹಲವು ಪತ್ರಗಳನ್ನು ಬರೆದಿದೆ. ಆದರೆ ಅವುಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

ಸುಮಲತಾ ಅಂಬರೀಶ್ ಬಿಜೆಪಿಗೆ ಅಧಿಕೃತ ಸೇರ್ಪಡೆ

ಬೆಂಗಳೂರು, ಏ. ೫: ನಟಿ-ಹಾಗೂ ಮಂಡ್ಯದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅಧಿಕೃತವಾಗಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕರ್ನಾಟಕ ಚುನಾವಣಾ ಉಸ್ತುವಾರಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಕೂಡ ಉಪಸ್ಥಿತರಿದ್ದರು. ಬಿಜೆಪಿ ಸೇರ್ಪಡೆಯಾಗುವ ಮುನ್ನ ಅಂಬರೀಷ್ ಸಮಾದಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದರು, ಪುತ್ರ ಅಭಿಷೇಕ್ ಅಂಬರೀಷ್ ಮತ್ತು ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು.

ಚುನಾವಣೆ ಬಳಿಕ ಪಿ.ಎಂ. ಅಭ್ಯರ್ಥಿ ಆಯ್ಕೆ-ರಾಹುಲ್

ನವದೆಹಲಿ, ಏ. ೫: ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ', ಲೋಕಸಭೆ ಚುನಾವಣೆ ಬಳಿಕ ಪ್ರಧಾನ ಮಂತ್ರಿ (ಪಿ.ಎಂ) ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಾರಿಯ ಚುನಾವಣೆಯು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ನಾಶ ಮಾಡಲು ಪ್ರಯತ್ನಿಸುತ್ತಿರುವವರು ಹಾಗೂ ರಕ್ಷಿಸಲು ಹೋರಾಡುತ್ತಿರುವವರ ನಡುವೆ ನಡೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದಿಕ್ಕಿಂತಲೂ, ವಾಸ್ತವದಲ್ಲಿ ಸ್ಪರ್ಧೆ ಅತ್ಯಂತ ಪೈಪೋಟಿಯಿಂದ ಕೂಡಿದೆ ಎಂದಿರುವ ಅವರು, ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

ನವದೆಹಲಿ, ಏ. ೫: ‘ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ೨೦೦೪ ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ' ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ, ಮನೋಜ್ ಮಿಶ್ರ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿತು. ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ಜಾರಿಗೊಳಿಸುವುದರಿಂದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂಬ ಅಲಹಾಬಾದ್ ಹೈಕೋರ್ಟ್ನ ತೀರ್ಪು ಸರಿಯಲ್ಲ ಎಂದು ನ್ಯಾಯಪೀಠವು ಹೇಳಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಿರ್ದಿಷ್ಟ ಶಿಕ್ಷಣವನ್ನು ಆಯ್ಕೆ ಮಾಡುವ ಅಧಿಕಾರ ಇದ್ದೇ ಇರುತ್ತದೆ. ಹಾಗಾಗಿ ಹೈಕೋರ್ಟ್ ತೀರ್ಪು ೧೭ ಲಕ್ಷ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಹಕ್ಕುಗಳು ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.