ಸೋಮವಾರಪೇಟೆ, ಏ. ೪: ವನ್ಯಜೀವಿ-ಮಾನವ ಸಂಘರ್ಷ, ಹೊಳೆಯಿಂದ ನೀರೆತ್ತಲು ತಡೆ, ವೈದ್ಯರ ಕೊರತೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ವನ್ಯಜೀವಿ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವನ್ಯಪ್ರಾಣಿ ಹಾವಳಿಯಿಂದ ಮಾನವ ಪ್ರಾಣಹಾನಿ, ಕೃಷಿ ಫಸಲು ಹಾನಿಯಾಗುತ್ತಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಸ್ತುತ ಮಳೆ ದೂರವಾಗಿದ್ದು, ಬಿರು ಬೇಸಿಗೆಯಿಂದ ಕೃಷಿ ಉಳಿಸಿಕೊಳ್ಳಲು ಅಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ಹೊಳೆಯಿಂದ ಪಂಪ್‌ಸೆಟ್ ಹಾಕಿ ನೀರನ್ನು ತೆಗೆಯಬಾರದೆಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದು, ಕೃಷಿಕರಿಗೆ ಭಾರೀ ಸಂಕಷ್ಟ ತಂದೊಡ್ಡಿದೆ. ತಕ್ಷಣ ಈ ಆದೇಶವನ್ನು ಹಿಂತೆಗೆಯುವAತೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹಿಂದಿನ ಬಿಜೆಪಿ ಶಾಸಕರುಗಳು ಇದ್ದಾಗ ೧೨ ಜನ ವೈದ್ಯರಿದ್ದು, ಪ್ರಸ್ತುತ ಎರಡು ಜನ ವೈದ್ಯರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ತಕ್ಷಣ ವೈದ್ಯರನ್ನು ನೇಮಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರೈತ ಮೋರ್ಚಾದ ಅಧ್ಯಕ್ಷ ಮಚ್ಚಂಡ ಪ್ರಕಾಶ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್, ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್, ಜಿಲ್ಲಾ ಉಪಾಧ್ಯಕ್ಷ ಮನು ರೈ ಹಾಗೂ ಹೆಚ್. ಕೆ. ಮಾದಪ್ಪ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ತಂಗಮ್ಮ, ಸೋಮವಾರಪೇಟೆ ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತಾ ವಿರೂಪಾಕ್ಷ ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.