ವೀರಾಜಪೇಟೆ, ಏ. ೬: ತಾ. ೨೬ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಚುನಾವಣಾ ಸಿಬ್ಬಂದಿಗಳಿಗೆ ಮತ್ತು ಮತಗಟ್ಟೆ ಅಧಿಕಾರಿಗಳಿಗೆ ತಾ. ೮ ರಂದು ಪ್ರಥಮ ಹಂತದ ತರಬೇತಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಪಟ್ಟಣದ ಸೆಂಟ್ ಆ್ಯನ್ಸ್ ವಿದ್ಯಾಸಂಸ್ಥೆಗಳ ಕಟ್ಟಡಕ್ಕೆ ಜಿಲ್ಲಾಧಿಕಾರಿ ವೆಂಕಟರಾಜ್ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ತಾಲೂಕು ತಹಶೀಲ್ದಾರ್ ಹೆಚ್. ರಾಮಚಂದ್ರ , ಸಹಾಯಕ ಚುನಾವಣಾಧಿಕಾರಿ ನಾರಾಯಣಸ್ವಾಮಿ, ಕಂದಾಯ ಪರಿವೀಕ್ಷಕ ಹರೀಶ್ ಅವರೊಂದಿಗೆ ಚರ್ಚಿಸಿ ಸುರಕ್ಷತೆ ಬಗ್ಗೆ ಅಗತ್ಯದ ಸಿದ್ಧತೆಗಳನ್ನು ಮಾಡುವಂತೆ ಸೂಚಿಸಲಾಯಿತು. ಸೋಮವಾರದಂದು ಬೆಳಿಗ್ಗೆ ೯ ಗಂಟೆಗೆ ಮತಯಂತ್ರಗಳ ನಿರ್ವಹಣೆ ಬಗ್ಗೆ ಮತ್ತು ಇತರ ಕಾರ್ಯಗಳ ಬಗ್ಗೆ ತರಬೇತಿ ನಡೆಯಲಿದೆ.