ಗೋಣಿಕೊಪ್ಪ, ಏ. ೬: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಗುತ್ತಿಗೆ ಆಧಾರದಲ್ಲಿ ಸರ್ಕಾರಿ ಜಾಗವನ್ನು ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ತಾ. ೧೫ ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭೂ-ಗುತ್ತಿಗೆ ವಿರೋಧಿ ಐಕ್ಯ ಹೋರಾಟ ಸಮಿತಿಯ ಪ್ರಮುಖರು ಎಚ್ಚರಿಸಿದ್ದಾರೆ.

ವಿರೋಧಿ ಹೋರಾಟ ಸಮಿತಿ ಯಲ್ಲಿ ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆ, ಆದಿವಾಸಿ, ಮೂಲನಿವಾಸಿ ಸಂಘಟನೆ ಸದಸ್ಯರು ಒಳಗೊಂಡಿದ್ದು, ಹೋರಾಟ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ವಿಭಾಗೀಯ ಸಂಚಾಲಕ ಕೃಷ್ಣಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾನೂನಿಗೆ ತಿದ್ದುಪಡಿ ತಂದಿದೆ. ಕಲಂ ೯೪ (ಇ) ಸೇರಿಸಿದ್ದು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಅಂತಹ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಕರ್ನಾಟಕ ಭೂ ಕಂದಾಯ ಅಧಿನಿಯಮ ೧೯೬೪ ಕ್ಕೆ ತಿದ್ದುಪಡಿ ತಂದಿರುವುದು ಬೇಸರದ ವಿಚಾರವಾಗಿದೆ. ಜಮೀನನ್ನು ಭೂ ರಹಿತರಿಗೆ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಂಚಾಲಕ ಪರಶುರಾಮ್ ಮಾತನಾಡಿ, ಜಿಲ್ಲೆಯ ತಾಲೂಕು ಕಚೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ಏಕಕಾಲದಲ್ಲಿ ಪ್ರತಿಭಟನೆ ನಡೆಯಲಿದೆ. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ. ಸುತ್ತೋಲೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಆಲ್ ಇಂಡಿಯಾ ದಲಿತ್ ರೈಟ್ಸ್ ಸಂಚಾಲಕ ರಮೇಶ್ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಆಲ್ ಇಂಡಿಯಾ ದಲಿತ್ ರೈಟ್ಸ್ ಸಂಚಾಲಕ ರಮೇಶ್