ಮಡಿಕೇರಿ, ಏ. ೬: ವೀರಾಜಪೇಟೆ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ವಿಎಫ್೧ ಅಮ್ಮತ್ತಿ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೮ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅಮ್ಮತ್ತಿ, ಕಾರ್ಮಾಡು, ಬಿಳುಗುಂದ, ಕಾವಾಡಿ, ನಲ್ವತ್ತೋಕ್ಲು ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಾಗೆಯೇ ೬೬/೧೧ಕೆವಿ ಮಡಿಕೇರಿ, ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಓಂಕಾರೇಶ್ವರ ಫೀಡರ್ನ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೮ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೦೬ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಓಂಕಾರೇಶ್ವರ ದೇವಸ್ಥಾನ ರಸ್ತೆ ಕನ್ನಂಡಬಾಣೆ, ಗೌಡ ಸಮಾಜ, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಗಣಪತಿ ಬೀದಿ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಅಭಿಯಂತರ ತಿಳಿಸಿದ್ದಾರೆ.