ಕುಶಾಲನಗರ, ಏ.೬: ಪೊಲೀಸ್ ಜೀಪ್ ಚಾಲಕನ ಹತೋಟಿ ತಪ್ಪಿ ರಸ್ತೆ ಡಿವೈಡರ್ ಮೇಲೆ ಹತ್ತಿದ ಘಟನೆ ಕುಶಾಲನಗರ ಸಮೀಪದ ಬೈಲುಕೊಪ್ಪ ಬಳಿ ರಾಷ್ಟಿçÃಯ ಹೆದ್ದಾರಿಯಲ್ಲಿ ನಡೆದಿದೆ.

ಬೈಲಕೊಪ್ಪ ಪೊಲೀಸ್ ಠಾಣೆಗೆ ಸೇರಿದ ಜೀಪ್ ರಾತ್ರಿ ವೇಳೆ ಕೊಪ್ಪ ಕಡೆಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಜೀಪ್‌ನಲ್ಲಿ ಚಾಲಕ ಮಾತ್ರ ಇದ್ದು ಘಟನೆಯಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು ಪೊಲೀಸ್ ವಾಹನಕ್ಕೆ ಹಾನಿ ಉಂಟಾಗಿದೆ. ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಕಾಂಕ್ರೀಟ್ ಡಿವೈಡರ್ ಅಳವಡಿಸಿದ ಕಾರಣ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.