ಮಡಿಕೇರಿ, ಏ. ೬: ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಇದೇ ಮೊದಲ ಬಾರಿಗೆ ಐ.ಪಿ.ಎಲ್. ಮಾದರಿಯಲ್ಲಿ ಮೇ ಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್ ಲೆದರಲ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಈ ಪಂದ್ಯಾವಳಿಯಲ್ಲಿ ಒಟ್ಟು ೧೦ ಫ್ರಾಂಚೈಸಿಗಳು ಪಾಲ್ಗೊಳ್ಳಲಿದ್ದು ತಂಡ ರಚನೆಗಾಗಿ ತಾ.೭ರಂದು (ಇಂದು) ಗೋಣಿಕೊಪ್ಪದ ಅಂತೂರು ಕೂರ್ಗ್ ಹಾಲ್ನಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಈಗಾಗಲೇ ಹಲವಷ್ಟು ಆಟಗಾರರು ಬಿಡ್ಡಿಂಗ್ಗಾಗಿ ಹೆಸರು ನೋಂದಾಯಿಸಿಕೊAಡಿದ್ದಾರೆ. ಕೂರ್ಗ್ ಕ್ರಿಕೆಟ್ ಫೌಂಡೇಶನ್ ನೋಂದಾಯಿತ ಸಂಸ್ಥೆಯಾಗಿದ್ದು, ಜನಾಂಗದಲ್ಲಿನ ಉತ್ತಮ ಆಟಗಾರರಿಗೆ ವೇದಿಕೆ ಕಲ್ಪಿಸಲು ಹಾಗೂ ಯುವ ಪ್ರತಿಭೆಗಳನ್ನು ಗುರುತಿಸಲು ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಸುತ್ತಿದೆ. ೧೦ ಫ್ರಾಂಚೈಸಿಗಳು ಮುಂದೆ ಬಂದಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪಂದ್ಯಾವಳಿ ಜರುಗಲಿದೆ. ತಾ.೭ರಂದು (ಇಂದು) ಆಟಗಾರರ ಬಿಡ್ಡಿಂಗ್ ಮೂಲಕ ತಂಡ ರಚನೆ ಪ್ರಕ್ರಿಯೆ ಅಂತಿಮವಾಗಲಿದೆ ಎಂದು ಸಂಸ್ಥೆಯ ಪ್ರಮುಖರಾದ ಪೊರ್ಕೋಂಡ ಸುನಿಲ್ ಹಾಗೂ ಪಾಲಚಂಡ ಜಗನ್ ಉತ್ತಪ್ಪ ಅವರು ತಿಳಿಸಿದ್ದಾರೆ.