ಮಡಿಕೇರಿ, ಏ. ೬: ಹಲ್ಲೆ ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ ಶಿಕ್ಷೆ ವಿಧಿಸಿದೆ.

ದಿನಾಂಕ : ೧೧.೧೧.೨೦೧೯ ರಂದು ಶನಿವಾರಸಂತೆ ಠಾಣಾ ವ್ಯಾಪ್ತಿಯ ತ್ಯಾಗರಾಜ ಕಾಲೋನಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ದಕ್ಷಿಣಮೂರ್ತಿ ಎಂಬವರ ಮನೆಗೆ ನುಗ್ಗಿದ ಸಿ.ಡಿ. ಬಸಪ್ಪ ಎಂಬಾತ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ದಕ್ಷಿಣ ಮೂರ್ತಿಯನ್ನು ಕೊಲೆ ಮಾಡುವ ಉದ್ದೇಶದಿಂದ ಪ್ಲೆöÊವುಡ್ ರೀಪರ್ ಪಟ್ಟಿಯಿಂದ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿ ಅವರನ್ನು ಮನೆಯಲ್ಲಿಯೇ ಕೂಡಿಹಾಕಿ ತೆರಳಿದ್ದ. ಈ ಪ್ರಕರಣ ಸಂಬAಧ ಶನಿವಾರಸಂತೆ ೩ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಪೊಲೀಸರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಸಿ. ಶ್ಯಾಮ್‌ಪ್ರಸಾದ್ ಅವರು ಆರೋಪಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಬಸಪ್ಪಗೆ ೩ ವರ್ಷ ಜೈಲು ಶಿಕ್ಷೆ ಹಾಗೂ ರೂ. ೫ ಸಾವಿರ ದಂಡ ವಿಧಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಕೆ.ಜಿ. ಅಶ್ವಿನಿ ವಾದ ಮಂಡಿಸಿದರು.