ಮಡಿಕೇರಿ, ಏ.೮: ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯಲ್ಲಿಯೂ ನೀರಿನ ಅಭಾವ ಉಂಟಾಗಿದ್ದು, ಜಿಲ್ಲೆಯ ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ, ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‌ಗೆಸ್ಟ್, ಹೋಮ್-ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿ ನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ.