ಹಿಮಪಾತದಲ್ಲಿ ಸಿಲುಕಿದ್ದ ೮೦ ಜನರನ್ನು ರಕ್ಷಿಸಿದ ಸೇನೆ
ಲೇಹ್, ಏ. ೭: ಕೇಂದ್ರಾಡಳಿತ ಪ್ರದೇಶ ಲಡಾಖ್ನ ಲೇಹ್ ಮತ್ತು ಶೋಕ್ ನದಿ ಕಣಿವೆಯ ನಡುವಿನ ೧೭,೬೮೮ ಅಡಿ ಎತ್ತರದ ಚಾಂಗ್ ಲಾ ಪಾಸ್ನಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಕನಿಷ್ಟ ೮೦ ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಭಾನುವಾರ ಹೇಳಿದೆ. ತ್ರಿಶೂಲ್ ವಿಭಾಗದ ಸೈನಿಕರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಭಾರತೀಯ ಸೇನೆಯ ಲೇಹ್ ಮೂಲದ ೧೪ ಕಾರ್ಪ್ಸ್ (ಫೈರ್ ಅಂಡ್ ಪ್ಯೂರಿ ಕಾರ್ಪ್ಸ್) ತಿಳಿಸಿದೆ. ಚಾಂಗ್ಲಾದ ಹಿಮಾವೃತ ಪ್ರದೇಶದಲ್ಲಿ ಭಾರಿ ಹಿಮಪಾತ ಸಂಭವಿತ್ತು. ಮಾಹಿತಿ ತಿಳಿದ ತ್ರಿಶೂಲ್ ವಿಭಾಗದ ಸೈನಿಕರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ತಡರಾತ್ರಿ ೨ ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ಹಿಮದಲ್ಲಿ ಸಿಲುಕಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು ೮೦ ಜನರನ್ನು ರಕ್ಷಿಸಿದ್ದಾರೆ ಎಂದು ಕಾರ್ಪ್ಸ್ ತನ್ನ ಅಧಿಕೃತ ಖಾತೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಯ ಕೆಲವು ಚಿತ್ರಗಳು ಮತ್ತು ವೀಡಿಯೋವನ್ನು ಸಹ ಹಂಚಿಕೊAಡಿದೆ.
ಅನುಮತಿ ಇಲ್ಲದಿರುವುದು ಬರ ಪರಿಹಾರ ವಿಳಂಬಕ್ಕೆ ಕಾರಣ
ಬೆಂಗಳೂರು, ಏ. ೭: ಕರ್ನಾಟಕಕ್ಕೆ ಬರ ಪರಿಹಾರ ವಿಳಂಬವಾಗಲು ಕೇಂದ್ರ ಸರ್ಕಾರ ಕಾರಣವಲ್ಲ. ಉನ್ನತಾಧಿಕಾರ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡದಿರುವುದು ಬರ ಪರಿಹಾರ ವಿಳಂಬಕ್ಕೆ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವೆ, ಕರ್ನಾಟಕ ಸರ್ಕಾರ ಅಕ್ಟೋಬರ್ನಲ್ಲಿ ಬರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅಂತರ ಸಚಿವಾಲಯದ ಕೇಂದ್ರ ತಂಡವು ಇಲ್ಲಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದೆ. ರಾಜ್ಯಕ್ಕೆ ಬರ ಪರಿಹಾರ ನೀಡದ ಕೇಂದ್ರವನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದ ಸೀತಾರಾಮನ್, ಬರ ಪರಿಹಾರ ಬಿಡುಗಡೆಗೆ ಕೆಲವು ಕಾರ್ಯವಿಧಾನಗಳ ಮೂಲಕ ಹೋಗಬೇಕಾಗಿದೆ ಮತ್ತು ಇದಕ್ಕೆ ಸಮಯ ತೆಗೆದುಕೊಂಡಿದೆ ಎಂದು ಹೇಳಿದರು.
ಕೇಜ್ರ್ರಿವಾಲ್ ಬಂಧನ ಖಂಡಿಸಿ ಉಪವಾಸ ಸತ್ಯಾಗ್ರಹ
ನವದೆಹಲಿ, ಏ. ೭: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರ್ರಿವಾಲ್ ಅವರ ಬಂಧನವನ್ನು ಖಂಡಿಸಿ ಎಎಪಿ ನಾಯಕರು ಭಾನುವಾರ ಜಂತರ್ ಮಂತರ್ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ಎಎಪಿ ಆಡಳಿತವಿರುವ ಪಂಜಾಬ್ನಲ್ಲಿ ಮುಖ್ಯಮಂತ್ರಿ ಭಗವಂತ ಮಾನ್ ಅವರು, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹುಟ್ಟೂರಾದ ಖಟ್ಟರ್ ಕಲಾನ್ನಲ್ಲಿ ಸಾಮೂಹಿಕ ಉಪವಾಸದಲ್ಲಿ ಪಾಲ್ಗೊಂಡಿದ್ದರು. ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಡೆಪ್ಯೂಟಿ ಸ್ಪೀಕರ್ ರಾಖಿ ಬಿಲಾ, ಸಚಿವರಾದ ಅತಿಶಿ, ಗೋಪಾಲ್ ರೈ ಮತ್ತು ಇಮ್ರಾನ್ ಹುಸೇನ್ ಸೇರಿದಂತೆ ಅನೇಕ ಎಎಪಿ ಹಿರಿಯ ನಾಯಕರು ಜಂತರ್ ಮಂತರ್ನಲ್ಲಿ ಬೆಳಿಗ್ಗೆ ೧೧ ಗಂಟೆಯಿAದ ಆರಂಭವಾದ ಸಾಮೂಹಿಕ ಉಪವಾಸದಲ್ಲಿ ಭಾಗವಹಿಸಿದ್ದರು. ಬೋಸ್ಟನ್ ಹಾರ್ವಡ್ ಸ್ಕೆ÷್ವÃರ್, ಲಾಸ್ ಏಂಜಲೀಸ್ನ ಹಾಲಿವುಡ್ ಸೈನ್, ವಾಷಿಂಗ್ಟನ್ ಡಿಸಿಯ ಭಾರತೀಯ ರಾಯಭಾರಿ ಕಚೇರಿಯ ಹೊರಗೆ, ನ್ಯೂಯಾರ್ಕ್ ಟೈಮ್ಸ್ ಸ್ಟೋರ್, ಟೊರೊಂಟೊ, ಲಂಡನ್ ಮತ್ತು ಮೆಲ್ಲೋರ್ನ್ ಸೇರಿದಂತೆ ಇತರೆಡೆ ಎಎಪಿ ಬೆಂಬಲಿತ ಭಾರತೀಯರಿಂದ ಪ್ರತಿಭಟನೆಗಳು ನಡೆದವು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಬಿಜೆಪಿಯಿಂದ ಎಸ್.ಟಿ. ಸೋಮಶೇಖರ್ಗೆ ನೋಟೀಸ್
ಬೆಂಗಳೂರು, ಏ. ೭: ಲೋಕಸಭಾ ಚುನಾವಣೆ ೨೦೨೪ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲಿಸುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಎಸ್.ಟಿ. ಸೋಮಶೇಖರ್ಗೆ ಬಿಜೆಪಿ ನೋಟೀಸ್ ಜಾರಿ ಮಾಡಿದೆ. ಪಕ್ಷದ ವಿರುದ್ಧ ಕೆಲಸ ಮಾಡುತ್ತಿರುವ ಹಿನ್ನೆಲೆ ನೋಟೀಸ್ ಕೊಡಲಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್, ಬಿಜೆಪಿ ಪರ ಕೆಲಸ ಮಾಡುವ ಬದಲು ಕಾಂಗ್ರೆಸ್ ಪರ ಕೆಲಸ ಮಾಡುತ್ತಿರುವುದು ಗೊತ್ತಾಗಿದೆ. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಅಲ್ಲದೇ, ಸಭಾಧ್ಯಕ್ಷರಿಗೂ ಸಹ ದೂರು ಕೊಡಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಎಸ್.ಟಿ. ಸೋಮಶೇಖರ್ ಮಾಡುತ್ತಿರುವುದು ತಪ್ಪು. ಶೀಘ್ರದಲ್ಲೇ ಅವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ಅವರು ತಮ್ಮ ತಪ್ಪಿಗೆ ಪಶ್ಚಾತಾಪಪಡಬೇಕಾಗುತ್ತದೆ. ಬಿಜೆಪಿಯಲ್ಲಿರುವ ಸೋಮಶೇಖರ್ ಅವರು ಬಿಜೆಪಿ ಅಭ್ಯರ್ಥಿಯ ಪರ ಕೆಲಸ ಮಾಡಬೇಕು. ಈಗಲೂ ಬಿಜೆಪಿ ಪರವಾಗಿ ಕೆಲಸ ಮಾಡಲು ಸೋಮಶೇಖರ್ ಅವರಿಗೆ ಅವಕಾಶವಿದೆ ಎಂದು ಹೇಳಿದರು.
ಜಮ್ಮು-ಕಾಶ್ಮೀರದ ಅಭ್ಯರ್ಥಿಗಳನ್ನು ಘೋಷಿಸಿದ ಪಿಡಿಪಿ
ಶ್ರೀನಗರ, ಏ. ೭: ಲೋಕಸಭಾ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ (ಪಿಡಿಪಿ) ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಪ್ರಕಟಿಸಿದೆ. ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಸರ್ತಾಜ್ ಮಾಗ್ನಿ ಈ ಕುರಿತು ಮಾತನಾಡಿ, ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫಿ ಅವರನ್ನು ಅನಂತ್ನಾಗ್ ಜಿಲ್ಲೆಯಿಂದ ಕಣಕ್ಕಿಳಿಸಲಾಗಿದೆ. ಯುವ ಮುಖಂಡ ವಾಹೀದ್ ಪರ್ರಾ ಶ್ರೀನಗರ ಕ್ಷೇತ್ರದಿಂದ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಮಿರ್ ಫಯಾಜ್ ಅವರು ಬಾರಾಮುಲ್ಲಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಭಾನುವಾರ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಅಲ್ಲದೆ ತಮ್ಮ ಪಕ್ಷವು ಉದಮ್ಪುರ್ ಮತ್ತು ಜಮ್ಮುವಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ. ಜಮ್ಮು ಕಾಶ್ಮಿರದ ವಿವಿಧ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಇದೇ ೨೬ರಂದು ಚುನಾವಣೆ ನಡೆಯಲಿದೆ.
ದಕ್ಷಿಣ ಕ್ಸಿನ್ಜಿಯಾಂಗ್ನಲ್ಲಿ ಭೂಕಂಪ
ಬೀಜಿAಗ್, ಏ. ೭: ಚೀನಾದ ದಕ್ಷಿಣ ಕ್ಸಿನ್ಜಿಯಾಂಗ್ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ೫.೫ ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಭೂಮಿಯ ಮೇಲ್ಮೆöÊನಿಂದ ೨೪ ಕಿ.ಮೀ. (೧೪.೯೧ ಮೈಲುಗಳು) ಆಳದಲ್ಲಿ ಭೂಮಿ ಕಂಪಿಸಿದೆ ಎಂದು ಇಎಂಎಸ್ಸಿ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಟಿಎಂಸಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಕೋಲ್ಕತ್ತ, ಏ. ೭: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಉಚಿತ ಪರವಾನಗಿ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಜಲ್ಪೈಗುರಿಯಲ್ಲಿ ಚುನಾವಣಾ ಸಮಾವೇಶದಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ ಮತ್ತು ಹಿಂಸಾಚಾರಕ್ಕೆ ಟಿಎಂಸಿ ಉಚಿತ ಪರವಾನಗಿ ನೀಡುತ್ತಿದೆ. ಇಂತಹ ಪ್ರಕರಣಗಳ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ಮಾಡಲು ಬಂದರೆ ರಾಜ್ಯದಲ್ಲಿ ಅವರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಮೋದಿ ಆರೋಪ ಮಾಡಿದರು. ಮೇದಿನಿಪುರದಲ್ಲಿ ೨೦೨೨ರಲ್ಲಿ ಸ್ಫೋಟ ನಡೆದಿತ್ತು. ಶನಿವಾರ ಈ ಪ್ರಕರಣ ಸಂಬAಧ ಎನ್ಐಎ ಅಧಿಕಾರಿಗಳು ಇಬ್ಬರನ್ನು ಬಂಧಿಸಲು ಯತ್ನಿಸಿದಾಗ ಅವರ ಮೇಲೆ ಜನರು ದಾಳಿ ಮಾಡಿದ್ದರು. ಈ ಘಟನೆ ನಡೆದ ಒಂದು ದಿನದ ಬಳಿಕ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದರು. ಟಿಎಂಸಿ ಸರ್ಕಾರ ಬಂಗಾಳದಲ್ಲಿ ಲೂಟಿ ಮತ್ತು ಭಯೋತ್ಪಾದನೆಗೆ ಮುಕ್ತ ಅವಕಾಶ ನೀಡಲು ಮುಂದಾಗಿದೆ. ಸುಲಿಗೆಕೋರರು, ಭಷ್ಟರನ್ನು ಟಿಎಂಸಿ ಸರ್ಕಾರ ರಕ್ಷಣೆ ಮಾಡುತ್ತಿದೆ. ಇಂತಹವರ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡಲು ಬಂದಾಗ ಅವರ ಮೇಲೆ ಪ್ರತಿದಾಳಿ ಮಾಡುವ ಕೆಲಸವನ್ನು ಟಿಎಂಸಿ ಸರ್ಕಾರ ಮಾಡುತ್ತಿದೆ ಎಂದು ಆರೋಪ ಮಾಡಿದರು.