ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ?: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಚಾಟಿ!
ನವದೆಹಲಿ, ಏ. ೮: ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂ ಕೋರ್ಟ್ಗೆ ಬರಬೇಕಾ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಕರ್ನಾಟಕ ಸರ್ಕಾರ ಬರ ಪರಿಹಾರ ಕೊಡಿಸುವಂತೆ ಕೇಂದ್ರದ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಈ ರೀತಿ ಪ್ರಶ್ನಿಸಿದೆ. ಕೇಂದ್ರ ಹಾಗೂ ರಾಜ್ಯಗಳ ನಡುವೆ ವಾದಗಳಾಗುವುದು ಬೇಡ ಎಂದೂ ಸುಪ್ರೀಂಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ. ಬರ ನಿರ್ವಹಣೆಗಾಗಿ ಎನ್ಡಿಆರ್ಎಫ್ನಿಂದ ಪರಿಹಾರ ಬಿಡುಗಡೆ ಮಾಡುವುದಕ್ಕೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ನ್ಯಾ. ಬಿ.ಆರ್. ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರ ಪೀಠ ಈ ವಿಚಾರಣೆ ನಡೆಸಿದ್ದು, ರಾಜ್ಯಗಳು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಕದತಟ್ಟಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ ಎಲ್ಲಾ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ? ಎಂದು ಪ್ರಶ್ನಿಸಿದೆ. ಇದೇ ವೇಳೆ ಕೇಂದ್ರಕ್ಕೆ ಈ ವಿಷಯವಾಗಿ ನೋಟೀಸ್ ಜಾರಿಗೊಳಿಸುವುದಾಗಿ ಕೋರ್ಟ್ ಮೌಖಿಕವಾಗಿ ಹೇಳಿತು. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
೩೦.೯೨ ಕೋಟಿ ರೂ. ಮುಖಬೆಲೆಯ ನಕಲಿ ನೋಟು ವಶ, ಐವರ ಬಂಧನ
ಬೆAಗಳೂರು, ಏ. ೮: ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಭರ್ಜರಿ ಬೇಟೆಯಾಡಿದ್ದಾರೆ. ೩೦.೯೨ ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬAಧ ಐವರನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದ್ದಾರೆ. ಸಾರ್ವಜನಿಕರಿಗೆ ೧೦೦ ಕೋಟಿ ಕಪ್ಪು ಹಣವಿರುವ ಬಗ್ಗೆ ನಂಬಿಸಿ ನಕಲಿ ನೋಟುಗಳನ್ನು ತೋರಿಸಿ, ಮಂಕುಬೂದಿ ಎರಚುತ್ತಿದ್ದ ಸುಧೀರ್, ಕಿಶೋರ್, ರಿಶಿ ಸೇರಿದಂತೆ ಇನ್ನಿಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳು ೪೦ ಲಕ್ಷ ನೀಡಿದರೆ ವಿವಿಧ ಕಂಪೆನಿಗಳ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಡಿ ಒಂದು ಕೋಟಿ ರೂಪಾಯಿ ಕೊಡಿಸುವುದಾಗಿ ಭರವಸೆ ನೀಡಿದ್ದರು. ಇವರು ಟ್ರಸ್ಟ್ಗಳನ್ನು ಟಾರ್ಗೆಟ್ ಮಾಡುತ್ತಿದ್ದರು ಎಂದು ದಯಾನಂದ ಹೇಳಿದರು. ಆರೋಪಿಗಳು ಒಂದು ಪಾರ್ಟಿಯ ಬಳಿ ಲಭ್ಯವಿರುವ ಕಪ್ಪು ಹಣವನ್ನು ವೀಡಿಯೋ ಕಾಲ್ ಮುಖಾಂತರ ತೋರಿಸಲು ೨೫ ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು. ಅಲ್ಲದೆ ಒಂದು ಜಾಗಕ್ಕೆ ಕರೆಸಿಕೊಂಡು ವೀಡಿಯೋ ಕಾಲ್ ಮುಖಾಂತರ ತಮ್ಮ ಬಳಿಯಿರುವ ಕಂತೆ ಕಂತೆ ಹಣದ ಬಂಡಲ್ಗಳನ್ನು ತೋರಿಸಿದ್ದರು. ಆದರೆ ದೂರುದಾರರಿಗೆ ಸಂಶಯ ವ್ಯಕ್ತವಾಗಿದ್ದರಿಂದ ಪೊಲೀಸರನ್ನು ಸಂಪರ್ಕಿಸಿದ್ದರು. ೫೦೦ ರೂ. ಮುಖಬೆಲೆಯ ೧,೯೦೦ ಬಂಡಲ್ಗಳು, ೨೦೦೦ ಮುಖಬೆಲೆಯ ೧,೦೭೦ ಬಂಡಲ್ಗಳು ಹಾಗೂ ೨೦೦೦ ಮುಖಬೆಲೆಯ ೮೦ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳ ಮನೆ ಮತ್ತು ಕಚೇರಿಯಲ್ಲಿ ಶೋಧ ನಡೆ ಒಟ್ಟು ೨೩,೪೯,೮೦೦ ರೂ. ಅಸಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಶೋಭಾ ಕರಂದ್ಲಾಜೆ ಕಾರಿನ ಡೋರ್ ತಗುಲಿ ಬೈಕ್ ಪಲ್ಟಿ; ಬಿಜೆಪಿ ಕಾರ್ಯಕರ್ತ ದುರ್ಮರಣ
ಬೆಂಗಳೂರು, ಏ. ೮: ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದಾನೆ. ಕೆ.ಆರ್. ಪುರದ ಬಸ್ ನಿಲ್ದಾಣದಲ್ಲಿರುವ ವಿನಾಯಕ ದೇವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು ಟಿ.ಸಿ. ಪಾಳ್ಯ ನಿವಾಸಿ ಪ್ರಕಾಶ್ (೬೦) ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕಾರಿನ ಡೋರ್ ತೆರೆದಾಗ ಹಿಂಬದಿಯಿAದ ಬರುತ್ತಿದ್ದ ಪ್ರಕಾಶ್ ಬೈಕ್ಗೆ ತಾಗಿ ಕೆಳಗೆ ಬಿದ್ದಿದ್ದು ಅವರ ಮೇಲೆ ಖಾಸಗಿ ಬಸ್ ಹರಿದಿದೆ. ಗಂಭೀರ ಗಾಯಗೊಂಡ ಪ್ರಕಾಶ್ರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಪ್ರಕಾಶ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೆ.ಆರ್. ಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಾರ ಪ್ರಮಾಣದ ಸ್ಫೋಟಕ ವಶ; ಓರ್ವನ ಬಂಧನ
ಕೋಲಾರ, ಏ. ೮: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ಪೋಸ್ಟ್ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಚೆಕ್ಪೋಸ್ಟ್ ಬಳಿ ಸ್ಫೋಟಕ ಸಾಗಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ೧೨೦೦ ಜಿಲೆಟಿನ್ ಕಡ್ಡಿಗಳು, ೭ ಬಾಕ್ಸ್ ವೈರ್, ೬ ಡಿಟೋನೇಟರ್ ವಶಪಡಿಸಿಕೊಳ್ಳಲಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಕ್ಸಲರ ಅಡಗುದಾಣ ಪತ್ತೆ:ಸ್ಫೋಟಕ, ಶಸ್ತಾçಸ್ತç ವಶಕ್ಕೆ!
ರಾಯ್ಪುರ, ಏ. ೮: ಛತ್ತೀಸ್ಘಡದಲ್ಲಿ ಮತ್ತೊಂದು ನಕ್ಸಲ್ ಅಡಗುದಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ನಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕ, ಶಸ್ತಾçಸ್ತçಗಳನ್ನು ವಶಕ್ಕೆ ಪಡೆದಿದ್ದಾರೆ. ಛತ್ತೀಸಗಢದ ಸುಖ್ಮಾ ಜಿಲ್ಲೆಯ ಎರಡು ಕಡೆಗಳಲ್ಲಿ ನಕ್ಸಲರ ಅಡಗುದಾಣಗಳನ್ನು ಭದ್ರತಾ ಪಡೆಗಳು ಪತ್ತೆ ಮಾಡಿದ್ದು, ಇಲ್ಲಿ ನಕ್ಸಲರು ಅಡಗಿಸಿಟ್ಟಿದ್ದ ಭಾರಿ ಪ್ರಮಾಣದ ಸ್ಫೋಟಕವನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಸಿಆರ್ಪಿಎಫ್, ಕೋಬ್ರಾ ಮತ್ತು ಬಸ್ತಾರ್ ಬೆಟಾಲಿಯನ್ಗಳು ಜಂಟಿ ಕಾರ್ಯಾಚರಣೆ ನಡೆಸಿ ಕಿಸ್ತರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡಮಾರ್ಕ ಮತ್ತು ಡಬ್ಬಮಾರ್ಕ ಹಳ್ಳಿಗಳಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೇನಾ ಮೂಲಗಳ ಪ್ರಕಾರ ದಾಳಿ ವೇಳೆ ೩೫೦ ಗ್ರಾಂ ಜಿಲೆಟಿನ್ ಸ್ಟಿಕ್ಸ್, ೧೦೫ ಎಲೆಕ್ಟ್ರಿಕ್ ಡೆಟೊನೇಟರ್ಸ್, ಬ್ಯಾರೆಲ್ ಗ್ರೆನೇಡ್ ಲಾಂಚರ್ (ಬಿಜಿಎಲ್), ೨೨ ಬಿಜಿಎಲ್ ಪ್ರೊಜೆಕ್ಟರ್ಗಳು, ೧೯ ಬಿಜಿಎಲ್ ಬಾಂಬ್ಗಳು, ೫ ಕೆ.ಜಿ. ತೂಕದ ಸುಧಾರಿತ ಸ್ಫೋಟಕ ಸಾಧನ, ೩೦ ಕೆ.ಜಿ. ಗನ್ಪೌಡರ್ ಮತ್ತು ಮಾವೋವಾದಿಗಳ ಬರಹವಿರುವ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.