ಮುಳ್ಳೂರು, ಏ. ೮: ಭಾರತ ೨೦೪೭ರ ಹೊತ್ತಿಗೆ ವಿಶ್ವದ ಏಕೈಕ ಅಭಿವೃದ್ದಿ ಹೊಂದಿದ ರಾಷ್ಟçವಾಗ ಬೇಕೆಂಬ ಧ್ಯೇಯೋದ್ದೇಶ ಹೊಂದಿರುವ ಪ್ರಧಾನಿ ನರೇಂದ್ರಮೋದಿ ಅವರು ಮತ್ತೊಮ್ಮೆ ರಾಷ್ಟçದ ಪ್ರಧಾನಮಂತ್ರಿ ಆಗಬೇಕಿದೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದರು. ಅವರು ಶನಿವಾರ ಸಂತೆ ಯಶಸ್ವಿನಿ ಕಲ್ಯಾಣ ಮಂಟಪದಲ್ಲಿ ತಾ. ೨೬ ರಂದು ನಡೆಯಲಿರುವ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಮ್ಮ ದೇಶದ ಅಭಿವೃದ್ಧಿ ಕುಂಠಿತಗೊAಡಿತ್ತು. ನರೇಂದ್ರಮೋದಿ ಅವರು ಪ್ರಧಾನ ಮಂತ್ರಿ ಆದ ಮೇಲೆ ನಮ್ಮ ದೇಶ ಅಭಿವೃದ್ಧಿ ಸಾಧಿಸುತ್ತಿರುವ ಜೊತೆಯಲ್ಲಿ ಆರ್ಥಿಕ ಅಭಿವೃದ್ಧಿಯಲ್ಲಿ ವಿಶ್ವದ ಗಮನ ಸೆಳೆದಿದೆ ಎಂದರು. ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಷ್ಟçದ ಪ್ರಧಾನ ಮಂತ್ರಿ ಆಗಬೇಕಿದ್ದು ಈ ನಿಟ್ಟಿನಲ್ಲಿ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಅವಶ್ಯಕತೆ ಇದ್ದು ಮತದಾರರು ಬಿಜೆಪಿ ಮತ್ತು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸುವಂತೆ ಮನವಿ ಮಾಡಿದರು.
ಮೈಸೂರು ರಾಜರು ೧೯೧೭ ರಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳ ಮೂಲಕ ರಾಜ್ಯ ಮತ್ತು ರಾಷ್ಟçಕ್ಕೆ ಕೊಡುಗೆಯನ್ನು ನೀಡಿದ್ದರು. ನಾನು ರಾಜ ವಂಶಸ್ಥರಾದರೂ ಜನ ಸಾಮಾನ್ಯರ ಜೊತೆಯಲ್ಲಿ ಬೆರೆಯುವ ವ್ಯಕ್ತಿಯಾಗಿದ್ದೇನೆ ಆಗ ರಾಜರು ಜನರ ಹಿತದೃಷ್ಟಿಯನ್ನು ಬಯಸುತ್ತಿದ್ದರು ಅದರಂತೆ ತನಗೂ ಸಾಮಾನ್ಯರ ಮೇಲೆ ಕಾಳಜಿ, ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ ಎಂದರು.
ವೀರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕಾಂಗ್ರೆಸ್ ಕೇವಲ ಗ್ಯಾರೆಂಟಿ ಕೊಡುವುದರಲ್ಲೆ ಕಾಲ ಕಳೆಯುತ್ತಿದೆ. ಹಿಂದೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ೫ ಗ್ಯಾರಂಟಿ ಈಗ ಲೋಕಸಭಾ ಚುನಾವಣೆಯಲ್ಲಿ ೨೫ ಗ್ಯಾರಂಟಿಗಳನ್ನು ಮುಂದಿಟ್ಟಿದೆ ಎಂದು ಲೇವಡಿ ಮಾಡಿದರು. ನಮ್ಮ ರಾಷ್ಟç ಕಳೆದ ೧೦ ವರ್ಷಗಳಲ್ಲಿ ಸಾಧಿಸಿರುವ ಅಭಿವೃದ್ಧಿಯ ಯೋಜನೆಗಳು ಇದರ ಜೊತೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ದೇಶದ ಎಲ್ಲರಿಗೂ ವ್ಯಾಕ್ಸಿನೇಶನ್ ಕೊಡಿಸುವ ಮೂಲಕ ದೇಶದ ಜನರನ್ನು ಪ್ರಾಣ ದಿಂದ ಕಾಪಾಡಿದ್ದಾರೆ ಮತ್ತೊಮ್ಮೆ ಅವರು ನಮ್ಮ ದೇಶದ ಪ್ರಧಾನಮಂತ್ರಿ ಆಗುವ ಹಿನ್ನೆಲೆಯಲ್ಲಿ ಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿ ಸುವುದರ ಜೊತೆ ಯಲ್ಲಿ ಕೊಡಗು-ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಮತದಾರರು ಮತ ಚಲಾಯಿಸುವಂತೆ ಮನವಿ ಮಾಡಿದರು.
ಮಡಿಕೇರಿ ಕ್ಷೇತ್ರದ ಮತ್ತೊಬ್ಬ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ-ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಯಧವೀರ್ ಒಡೆಯರ್ ಅವರನ್ನು ನಾವೆಲ್ಲಾರೂ ಗೆಲ್ಲಿಸಿಕೊಡಬೇಕಾಗಿದೆ, ಈ ನಿಟ್ಟಿನಲ್ಲಿ ಮನೆಮನೆಗೆ ಹೋಗಿ ಅವರಿಗೆ ಮತ ಹಾಕುವಂತೆ ಪ್ರಚಾರ ಮಾಡಬೇಕಿದೆ, ಹಾಗೆಯೇ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆಯಲ್ಲಿ ಗೆಲ್ಲಲು ಪ್ರಚಾರ ಮಾಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್ಸಿ ಸುಜಾ ಕುಶಾಲಪ್ಪ, ಜೆಡಿಎಸ್ ಮುಖಂಡ ವಿಶ್ವ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರಾದ ಎಸ್.ಜಿ. ಮೇದಪ್ಪ, ಮಾಜಿ ಎಂಎಲ್ಸಿ ಎಂ.ಪಿ. ಸುನಿಲ್ ಸುಬ್ರಮಣಿ, ಪದಾಧಿಕಾರಿಗಳಾದ ರಾಬಿನ್ ದೇವಯ್ಯ, ಮಹೇಶ್ ಜೈನಿ, ಎಸ್.ಎನ್. ರಘು, ಭುವನೇಶ್ವರಿ ಹರೀಶ್, ಜೆಡಿಎಸ್ ಮುಖಂಡ ನಾಗೇಶ್ ಬಿ.ಜೆ.ಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು,