ಶ್ರೀಮಂಗಲ, ಏ. ೮: ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ವತಿಯಿಂದ ಅಂತರರಾಷ್ಟಿçÃಯ ಮಹಿಳಾ ದಿನವನ್ನು ತಾ. ೧೧ರಂದು ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಆಚರಿಸಲಾಗುತ್ತದೆ.

ಪೂರ್ವಾಹ್ನ ೧೧ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಣಿಯಂಡ ಕಾವ್ಯ ಸೋಮಯ್ಯ, ಮುಖ್ಯ ಅತಿಥಿಗಳಾಗಿ ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಎಂ. ಮೋಟಯ್ಯ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಸ್ತಿçÃರೋಗ ತಜ್ಞರಾದ ಡಾ. ಮುಕ್ಕಾಟೀರ ಗ್ರೀಷ್ಮ ಬೋಜಮ್ಮ, ಉಪನ್ಯಾಸಕಿ ಹಾಗೂ ಸಮಾಜ ಸೇವಕಿ ಅಜ್ಜಿಕುಟ್ಟಿರ ಕಾಂಚನಾ ಪೊನ್ನಣ್ಣ ಭಾಗವಹಿಸಲಿದ್ದಾರೆ.