ಕುಶಾಲನಗರ, ಏ. ೮: ಹಸಿರು ಕ್ರಾಂತಿಯ ಹರಿಕಾರ, ದೇಶದ ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಅವರ ಆದರ್ಶ ತತ್ವಗಳನ್ನು ಮುಂದಿನ ಪೀಳಿಗೆಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ ಎಂದು ಮುಖ್ಯ ಶಿಕ್ಷಕರಾದ ವೆಂಕಟ ನಾಗೇಶ್ ಕರೆ ನೀಡಿದ್ದಾರೆ.
ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಕುಶಾಲನಗರ ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಬಾಬು ಜಗಜೀವನ್ ರಾಮ್ ಅವರ ೧೧೭ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು.
ಸಾಮಾಜಿಕ ತಾರತಮ್ಯಗಳ ವಿರುದ್ಧ ಹಾಗೂ ಸಮಾನತೆಗಾಗಿ ಹೋರಾಟ ಮಾಡಿದ ಬಾಬು ಜಗಜೀವನ್ ರಾಮ್ ಅವರು ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು. ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಮಧುಸೂದನ್, ನಿವೃತ್ತ ಅರಣ್ಯ ಅಧಿಕಾರಿ ಸಿದ್ದಪ್ಪ, ದಲಿತ ಸಂಘರ್ಷ ಸಮಿತಿ ಪ್ರಮುಖರಾದ ದಾಮೋದರ್, ಕೆ.ಬಿ. ರಾಜು ಲಕ್ಷö್ಮಯ್ಯ, ಹೆಚ್.ಎಂ. ರಘು ಮತ್ತಿತರರು ಇದ್ದರು.ಚೆಯ್ಯಂಡಾಣೆ: ಪೊನ್ನಂಪೇಟೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ವೇದಿಕೆಯಲ್ಲಿ ತಹಶೀಲ್ದಾರ್ ಮೋಹನ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರೀತಿ ಚಿಕ್ಕಮಾದಯ್ಯ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಸ್ವಪ್ನ ನಿರೂಪಿಸಿ, ಪದ್ಮಶ್ರೀ ಸ್ವಾಗತಿಸಿ ವಂದಿಸಿದರು.