ಮುಳ್ಳೂರು, ಏ. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶನಿವಾರಸಂತೆ ಸಮೀಪದ ಹಾರೋಹಳ್ಳಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕ್ಷೇತ್ರದಿಂದ ಮಂಜೂರಾದ ಒಂದು ಲಕ್ಷ ಮೊತ್ತದ ಡಿಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ವಿತರಿಸಿದರು.
ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹಾಗೂ ಪದಾಧಿಕಾರಿಗಳು, ಶನಿವಾರಸಂತೆ ವಲಯ ಮೇಲ್ವಿಚಾರಕ ನಾಗರಾಜ್ ಮುಂತಾದವರು ಹಾಜರಿದ್ದರು.