ಸುಂಟಿಕೊಪ್ಪ, ಏ. ೮: ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ತಾ. ೯ರಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ. ದೇವಾಲಯದಲ್ಲಿ ವಿಶೇಷ ಪೂಜೆ ಪಂಚಾAಗ ಶ್ರವಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಏರ್ಪಡಿಸಲಾಗಿದೆ. ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಪತ್ರಿಕಾ ತಿಳಿಸಿದೆ.

ತಾ. ೨೯ರಂದು ದೇವಾಲಯದ ವಾರ್ಷಿಕೋತ್ಸವ ನಡೆಯಲಿದ್ದು, ಅಂದು ಬೆಳಿಗ್ಗೆ ೭ ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದ್ದು, ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ವಾರ್ಷಿಕೋತ್ಸವ ಅಂಗವಾಗಿ ಮಧ್ಯಾಹ್ನ ದೇವಾಲಯದ ತಕ್ಕರ ಮನೆಯಿಂದ ಭಂಡಾರ ತಂದು ದೇವಾಲಯದಲ್ಲಿ ಹಬ್ಬದ ವಿಧಿವಿಧಾನಗಳು ನಡೆಯಲಿವೆ.

ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ತಾ. ೧೮ ರಂದು ದೇವಾಲಯದಲ್ಲಿ ಹಬ್ಬದ ಕಟ್ಟನ್ನು ತೆಗೆಯಲಾಗುತ್ತದೆ. ತಾ. ೨೬ ರಂದು ಶ್ರೀ ಬಸವೇಶ್ವರ ದೇವರ ಉತ್ಸವವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.