ಮಡಿಕೇರಿ, ಏ. ೮: ಬೆಂಗಳೂರಿನಿAದ ಮಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ರಾಷ್ಟಿçÃಯ ಹೆದ್ದಾರಿ ನಡುವಿನ ಜೋಡುಪಾಲದಲ್ಲಿ ಪಲ್ಟಿಯಾದ ಘಟನೆ ನಡೆದಿದೆ.

ಗೌರಿಶಂಕರ ಟ್ರಾವೆಲ್ಸ್ಗೆ ಸೇರಿದ ಬಸ್ ಪ್ರಯಾಣಿಕರನ್ನು ಕರೆದುಕೊಂಡು ಮಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ೧೮ ಪ್ರಯಾಣಿಕರಲ್ಲಿ ಕೆಲ ಮಂದಿ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ ಪಲ್ಟಿಯಾದ ಪರಿಣಾಮ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕಾಗಮಿಸಿ ಸಂಪಾಜೆ ಉಪಠಾಣೆ ಪೊಲೀಸರು ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.