ಹೊಸದಿಲ್ಲಿ, ಏ.೮: ೫, ೮, ೯ ಮತ್ತು ೧೧ ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ೫, ೮, ೯ ಮತ್ತು ೧೧ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು ಈ ತರಗತಿಗಳ ಪರೀಕ್ಷೆಗಳ ಫಲಿತಾಂಶಗಳ ಘೋಷಣೆಗೆ ತಡೆ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ನ ನಿರ್ದೇಶನದ ಮೇರೆಗೆ ಕಳೆದ ತಿಂಗಳು ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು.

(ಮೊದಲ ಪುಟದಿಂದ) ೫, ೮, ೯ ಮತ್ತು ೧೧ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್ ೨೨ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಆದರೆ ಇದೀಗ ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಒಕ್ಕೂಟ ರುಪ್ಲಾ ಕೋರ್ಟ್ ಮೆಟ್ಟಿಲೇರಿ ಪರೀಕ್ಷೆ ನಡೆಸದಂತೆ ಕೋರಿತ್ತು. ನ್ಯಾಯಾಲಯ ಪರೀಕ್ಷೆಗೆ ತಡೆಯಾಜ್ಞೆ ನೀಡಿದ್ದರಿಂದ ನಿಗದಿತ ಸಮಯದಲ್ಲಿ ಪರೀಕ್ಷೆ ನಡೆಯದೆ ವಿಳಂಬವಾಗಿತ್ತು. ನಂತರದಲ್ಲಿ ಪರೀಕ್ಷೆ ನಡೆಸಲು ಸಮ್ಮತಿ ನೀಡಿದ ಬಳಿಕ ಮಾರ್ಚ್ ಕೊನೆಯಲ್ಲಿ ಪರೀಕ್ಷೆ ನಡೆಸಲಾಯಿತು. ಇದೀಗ ಫಲಿತಾಂಶ ಪ್ರಕಟ ಮಾಡುವ ಸಂದರ್ಭದಲ್ಲಿ ಒಕ್ಕೂಟ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಕೋರ್ಟ್ ತಡೆಯಾಜ್ಞೆ ನೀಡಿದೆ. ಮೌಲ್ಯ ಮಾಪನದಲ್ಲಿ ದೋಷವಿರುವದಾಗಿ ಒಕ್ಕೂಟ ಆರೋಪ ಮಾಡಿದೆ.

ಡೋಲಾಯಮಾನ ಸ್ಥಿತಿ : ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ಫಲಿತಾಂಶದಲ್ಲಿ ಉಂಟಾದ ಗೊಂದಲದಿAದಾಗಿ ವಿದ್ಯಾರ್ಥಿಗಳ ಸ್ಥಿತಿ ಡೋಲಾಯಮಾನವಾಗಿದೆ. ಈಗಾಗಲೇ ಕೆಲವು ಶಾಲೆಗಳು ಫಲಿತಾಂಶ ಘೋಷಣೆ ಮಾಡಿಯಾಗಿದೆ. ಇಂದು ಬಹುತೇಕ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಫಲಿತಾಂಶ ಪ್ರಕಟವಾಗಿದೆ. ಸರಕಾರಿ ಶಾಲೆಗಳಲ್ಲೂ ಫಲಿತಾಂಶ ಘೋಷಣೆಯಾಗಿದ್ದು, ತಾ.೧೦ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮಗಳಿಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಇದೀಗ ತಡೆಯಾಜ್ಞೆ ಬಂದಿರುವದರಿAದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೊಳಗಾಗಿದ್ದಾರೆ.