ಸೋಮವಾರಪೇಟೆ, ಏ. ೮: ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಬೂತ್ನ ಎಲ್ಲಾ ಮತದಾರರಿಗೂ ತಲುಪಿಸಿದ್ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಸಿ, ಜಯ ಸಾಧಿಸಲು ಸಾಧ್ಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶ, ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ವ್ಯಾಪಕವಾಗಿದೆ. ಅವರ ಭ್ರಷ್ಟ ಆಡಳಿತದ ಬಗ್ಗೆ ಮತದಾರರಿಗೆ ಮನವರಿಕೆಯಾಗಿದೆ. ಈಗ ಬಿಜೆಪಿ ನಾಯಕರು ಸುಳ್ಳು ಹೇಳಿಕೊಂಡು ಸುತ್ತುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪಕ್ಷದ ಹಿರಿಯ ಸದಸ್ಯರು ಹೆಚ್ಚಿನ ಜವಾಬ್ದಾರಿ ಪಡೆದು ಬೂತ್ ಮಟ್ಟದಲ್ಲಿ ಕೆಲಸ ಮಾಡಿದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಲಕ್ಷö್ಮಣ್ ಅವರು ಹೆಚ್ಚಿನ ಮತಗಳನ್ನು ಪಡೆಯಲು ಸಾಧ್ಯ. ರಾಜ್ಯದಲ್ಲಿ ನುಡಿದಂತೆ ಕಾಂಗ್ರೆಸ್ನ ಸಿದ್ದರಾಮಯ್ಯ ಸರ್ಕಾರ ನಡೆದುಕೊಂಡಿದೆ. ಅದೇ ರೀತಿಯಲ್ಲಿ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ ನೀಡಿರುವ ಎಲ್ಲಾ ಭರವಸೆಗಳು ಈಡೇರುತ್ತವೆ ಎಂದರು.
ಜನಪ್ರತಿನಿಧಿಗಳು ಜನರಿಗೆ ಮೂಲಭೂತ ಸೌಕರ್ಯ ನೀಡಲು ಮೊದಲ ಆದ್ಯತೆ ನೀಡಬೇಕು. ಆದರೆ, ಹಿಂದಿನ ಸಂಸದರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರೇ ಅವರಿಗೆ ಟಿಕೇಟ್ ತಪ್ಪಿಸುವ ಕೆಲಸ ಮಾಡಿದರು. ನಮ್ಮ ಕೈಗೆಟುಕುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಹೇಳಿದರು.
ಭಾರತ ಬಲಿಷ್ಠ ರಾಷ್ಟçವಾಗಿ ಹೊರಹೊಮ್ಮಬೇಕಾದರೆ ಕಾಂಗ್ರೆಸ್ ದೇಶದ ಚುಕ್ಕಾಣಿ ಹಿಡಿಯಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅಭಿಪ್ರಾಯಿಸಿದರು. ಜವಾಹರ್ಲಾಲ್ ನೆಹರು ಪ್ರಧಾನಿಯಾದ ಕಾಲದಿಂದ ಭಾರತ ಅಭಿವೃದ್ಧಿ ಪಥದಲ್ಲೇ ಸಾಗಿತ್ತು. ಅವರ ಹಸಿರು ಕ್ರಾಂತಿಯಿAದ ಆರ್ಥಿಕ ಸಬಲತೆ ಕಂಡಿತು. ಇಂದಿರಾಗಾAಧಿ ಅವರ ೨೦ ಅಂಶಗಳ ಕಾರ್ಯಕ್ರಮ ಇವತ್ತಿಗೂ ಮುಂದುವರಿದಿದೆ ಎಂದರು.
ದೇಶದ ಸಂವಿಧಾನ ಉಳಿವಿಗಾಗಿ ಈ ಬಾರಿಯ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮತ್ತೊಮ್ಮೆ ಮೋದಿ ಪ್ರಧಾನಿಯಾಗಬಾರದು ಎಂದು ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ದೇಶದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ವಿರೋಧಪಕ್ಷದ ನಾಯಕರನ್ನು ಜೈಲಿಗೆ ಹಾಕಿ, ಚುನಾವಣೆ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರನ್ನು ಟೀಕೆ ಮಾಡುವವರನ್ನು ರಾಜಕೀಯವಾಗಿ ಮುಗಿಸುವ ತಂತ್ರ ಮಾಡಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಕೊಟ್ಟ ೫ ಗ್ಯಾರಂಟಿಗಳಿAದ ಹೆಚ್ಚಿನ ಕುಟುಂಬಗಳು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ೨೫ ಗ್ಯಾರಂಟಿಗಳಿವೆ. ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಆಗಲಿದೆ. ಬಡ ಮಹಿಳೆಯರ ಕುಟುಂಬಕ್ಕೆ ವಾರ್ಷಿಕ ೧ ಲಕ್ಷ ರೂ. ಸಹಾಯಧನ ಸೇರಿದಂತೆ ಎಲ್ಲಾ ಗ್ಯಾರಂಟಿಗಳು ಜನರಿಗೆ ಸಿಗಲಿವೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ. ಚಂದ್ರಕಲಾ, ಸದಸ್ಯ ಕೆ.ಎ. ಯಾಕೂಬ್, ಮಡಿಕೇರಿ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ನಟೇಶ್ಗೌಡ ಮಾತನಾಡಿದರು. ಪಕ್ಷದ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್, ಬಿ.ಎನ್. ಬಸವರಾಜು, ಹೆಚ್.ಎ. ನಾಗರಾಜು, ಶೀಲಾ ಡಿಸೋಜ, ಲಾರೆನ್ಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.