ವೀರಾಜಪೇಟೆ, ಏ. ೧೧ : ಲೋಕಸಭಾ ಚುನಾವಣೆಯ ಪ್ರಯುಕ್ತ ಮೈಸೂರು- ಕೊಡಗು ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಯದುವೀರ್ ಒಡೆಯರ್ ಅವರು ತಮ್ಮ ಬೆಂಬಲಿಗರೊAದಿಗೆ ವೀರಾಜಪೇಟೆ ಬಳಿಯ ಅರಮೇರಿ ಕಳಂಚೇರಿ ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ. ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ಜಿಲ್ಲಾ ಅಧ್ಯಕ್ಷ ನಾಪಂಡ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ರಾಜ್ಯ ಸಮಿತಿಯ ರೀನಾ ಪ್ರಕಾಶ್, ಮುಖಂಡರಾದ ಚಲನ್ ಕುಮಾರ್, ಮಧುದೇವಯ್ಯ, ಪಿ. ವಿಷ್ಣು, ಸುವಿನ್ ಗಣಪತಿ, ಅಜಿತ್ ಕರುಂಬಯ್ಯ, ಭವ್ಯ, ಮತ್ತಿತರರು ಹಾಜರಿದ್ದರು.