ಕುಶಾಲನಗರ, ಏ. ೧೧: ಕುಶಾಲನಗರದಲ್ಲಿ ನೆಲೆಸಿರುವ ರಾಜಸ್ಥಾನ ಸಮುದಾಯದ ೧೨ ಮಂದಿ ಯುವಕರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿ ದ್ದಾರೆ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ ಮಂಥರ್ ಗೌಡ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಪಟ್ಟಣದ ಕೆಇಬಿ ಕಚೇರಿ ಸಮೀಪ ಇರುವ ರಾಜಸ್ಥಾನ ಸಮುದಾಯ ಭವನಕ್ಕೆ ತೆರಳುವ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವಾಗಿ ಮಾಡಿಕೊಡುವಂತೆ ಸಮುದಾಯದ ಪ್ರಮುಖರು ಶಾಸಕರಿಗೆ ಈ ಸಂದರ್ಭ ಮನವಿ ಮಾಡಿದರು. ಸಮುದಾಯದ ಪ್ರಮುಖರಾದ ಕೇರಾ ರಾಂ ನೇತೃತ್ವದಲ್ಲಿ ಯುವಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಶಾಸಕರು ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಪಿ ಶಶಿಧರ್, ನಗರ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಸದಸ್ಯರಾದ ಮಂಜುನಾಥ ಗುಂಡುರಾವ್ ಮತ್ತು ವಿವಿಧ ಘಟಕಗಳ ಪ್ರಮುಖರು ಇದ್ದರು.