ನಾಪೋಕ್ಲು, ಏ. ೧೧: ಸಮೀಪದ ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವ ತಾ. ೧೩ ರಿಂದ ೧೯ ರವರೆಗೆ ನಡೆಯಲಿದೆ.

ತಾ. ೧೩ ರಂದು ಶನಿವಾರ ಮಹಾಲಿಂಗೇಶ್ವರ ದೇವರ ಮೂಲ ಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಗುವುದು. ತಾ. ೧೪ ರಂದು ಗಣ ಹೋಮ ಮತ್ತು ಕೊಡಿಮರ ಏರಿಸುವುದು, ತಾ. ೧೫ ರಂದು ಸೋಮವಾರ ಬೆಳಿಗ್ಗೆ ಮಧ್ಯಾಹ್ನ ಮತ್ತು ರಾತ್ರಿ ಉತ್ಸವಬಲಿ ನಡೆಯಲಿದೆ. ತಾ. ೧೬ ರಂದು ಮಂಗಳವಾರ ಉತ್ಸವ ಬಲಿ ಮತ್ತು ರಾತ್ರಿ ದೀಪಾರಾಧನೆ ನಡೆಯಲಿದೆ. ತಾ. ೧೭ ರಂದು ಬುಧವಾರ ಹಗಲು ಉತ್ಸವಬಲಿ ನಡೆದು ಸಂಜೆ ದೀಪಾರಾಧನೆ ನಡೆಯಲಿದೆ. ತಾ. ೧೮ ರಂದು ಗುರುವಾರ ಪಟ್ಟಣಿ ಹಬ್ಬ ಜರುಗಲಿದೆ. ಬೆಳಿಗ್ಗೆ ತುಲಾಭಾರ, ಮಧ್ಯಾಹ್ನ ಎತ್ತುಪೋರಾಟ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದೆ. ಅಪರಾಹ್ನ ಜೋಡಿ ದೇವರ ನೃತ್ಯೋತ್ಸವ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಹಾಲಿಂಗೇಶ್ವರ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಕೋರಿದ್ದಾರೆ.