ಮುಳ್ಳೂರು, ಏ. ೧೧: ಶನಿವಾರಸಂತೆಯಿAದ ದುಂಡಳ್ಳಿ-ಬಿಳಾಹ ಮಾರ್ಗವಾಗಿ ಯಸಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆ ಸಹಕಾರ ನೀಡದೆ ಅಡ್ಡಿ ಮಾಡುತ್ತಿದೆ ಎಂದು ಆರೋಪಿಸಿ ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಲೋಕೋಪಯೋಗಿ ಇಲಾಖೆ ಮೂಲಕ ರಸ್ತೆ ಕಾಮಗಾರಿಯನ್ನು ಉದ್ದೇಶಿಸಲಾಗಿದೆ. ಕಾಮಗಾರಿ ಸಂದರ್ಭ ತೋಟದ ಬದಿಯಲ್ಲಿರುವ ಮರಗಳನ್ನು ತೆರವುಗೊಳಿಸುವ ಕುರಿತು ಅರಣ್ಯ ಇಲಾಖೆಗೆ ಲೋಕೋಪಯೋಗಿ ಇಲಾಖೆ ಮನವಿ ಮಾಡಿ ಹಲವು ಸಮಯ ಕಳೆದಿದೆ. ಈ ನಡುವೆ ಕೆಲವರು ಅನಾಮಧೇಯ ಪತ್ರದ ಮೂಲಕ ಮರ ತೆರವಿಗೆ ಆಕ್ಷೇಪ ವ್ಯಕ್ತಪಡಿಸಿ ಪತ್ರವನ್ನು ಬರೆದಿದ್ದಾರೆ. ಇದರಿಂದ ವಿಳಂಬವಾಗಿ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸೇರಿ ಸಭೆ ನಡೆಸಿ ಒಂದು ವಾರದಲ್ಲಿ ಮರಗಳನ್ನು ತೆರವು ಗೊಳಿಸಲು ನಿರ್ಣಯಿಸಲಾಗಿತ್ತು. ಆದರೆ, ಇದುವರೆಗೂ ಕ್ರಮಕೈಗೊಳ್ಳದೆ ರಸ್ತೆ ಕಾಮಗಾರಿಗೆ ಅಡ್ಡಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಈ ಸಂಬAಧ ಇಲಾಖೆ ಕ್ರಮಕೈಗೊಳ್ಳದಿದ್ದರೆ ಚುನಾವಣೆಯನ್ನು ಬಹಿಷ್ಕರಿಸಲಾಗುತ್ತದೆ ಎಂದು ಆರ್‌ಎಫ್‌ಓ ಗಾನಶ್ರೀ ಅವರ ಮುಂದೆ ಪಟ್ಟು ಹಿಡಿದರು. ಸೋಮವಾರಪೇಟೆ ತಹಶೀಲ್ದಾರ್ ನವೀನ್ ಕುಮಾರ್ ಸ್ಥಳಕ್ಕಾಗಮಿಸಿ ಗ್ರಾಮಸ್ಥರೊಂದಿಗೆ ಚರ್ಚಿಸಿದ ಬಳಿಕ ಒಂದು ವಾರದೊಳಗೆ ಸಮಸ್ಯೆ ಸರಿಪಡಿಸಿ ಕೊಡುವುದಾಗಿ ಭರವಸೆ ನೀಡಿದ ಬಳಿಕ ಗ್ರಾಮಸ್ಥರು ತಾತ್ಕಾಲಿಕವಾಗಿ ಚುನಾವಣಾ ಬಹಿಷ್ಕಾರವನ್ನು ಹಿಂಪಡೆಯುತ್ತೇವೆ. ಆದರೆ ಅರಣ್ಯ ಇಲಾಖೆ ವಾರದೊಳಗೆ ಮರ ತೆರವುಗೊಳಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭ ವಿವಿಧ ಗ್ರಾಮದ ಪ್ರಮುಖರಾದ ಗಂಗನಳ್ಳಿ ಸುರೇಶ್, ದುಂಡಳ್ಳಿ ಶಂಭು, ಬಿಳಾಹ ನಾಗಣ್ಣ, ದುಂಡಳ್ಳಿ ಮೋಹನ್, ಶನಿವಾರಸಂತೆ ಯ ಎಸ್.ಎನ್.ರಘು ಸೇರಿದಂತೆ ದುಂಡಳ್ಳಿ, ಬಿಳಾಹ, ತೋಯಳ್ಳಿ, ಶಿರಹ ಗ್ರಾಮಸ್ಥರು ಪಾಲ್ಗೊಂಡಿದ್ದರು.

- ಭಾಸ್ಕರ್, ಮುಳ್ಳೂರು