ಕೂಡಿಗೆ, ಏ. ೧೧: ತೊರೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ಧಲಿಂಗಪುರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕುಶಾಲನಗರ ತಾಲೂಕು ಜೆ.ಡಿ.ಎಸ್. ಪಕ್ಷದ ತಾಲೂಕು ಅಧ್ಯಕ್ಷ ಪಿ. ಡಿ. ರವಿಕುಮಾರ್ ಸೇರಿದಂತೆ ೨೦. ಕ್ಕೂ ಹೆಚ್ಚು ಜೆ.ಡಿ.ಎಸ್, ಮತ್ತು ಬಿ.ಜೆ.ಪಿ. ಕಾರ್ಯಕರ್ತರು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಮಂಥರ್ ಗೌಡ ಮಾತಾಡುತ್ತಾ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಯ ಜೊತೆಯಲ್ಲಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಪೂರಕವಾದ ಯೋಜನೆಗಳನ್ನು ಕೈಗೊಳ್ಳುವುದರ ಜೊತೆಗೆ ಹೆಚ್ಚು ಅನುದಾನವನ್ನು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ನೀಡುವ ಮೂಲಕ ಒತ್ತು ಕೊಡುತ್ತಿದೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಸಹಕಾರ ನೀಡುವಂತೆ ಕೋರಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ತೊರೆನೂರು ಬ್ಯಾಂಕ್ ನ ನಿರ್ದೇಶಕ, ಕೆ.ಎಸ್ ಕೃಷ್ಣ ಗೌಡ, ತೊರೆನೂರು ದೇವಾಲಯ ಸಮಿತಿಯ ಅಧ್ಯಕ್ಷ ಟಿ. ಎಸ್. ಜಗದೀಶ್, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಪಿ. ಡಿ. ರವಿಕುಮಾರ್, ತೊರೆನೂರು ಗ್ರಾಮ ಪಂಚಾಯತಿ ಸದಸ್ಯ ಮಹದೇವ, ಶಿರಂಗಾಲ ದೇವಾಲಯ ಸಮಿತಿಯ ಅಧ್ಯಕ್ಷ ಚಂದ್ರಶೇಖರ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ರಮೇಶ್, ಶ್ರೀನಿವಾಸ್, ಹೆಬ್ಬಾಲೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಾಜಶೇಖರ್, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಸಂಜೀವಯ್ಯ, ಸೇರಿದಂತೆ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.