ಸೋಮವಾರಪೇಟೆ, ಏ. ೧೨ : ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. ೧೪ರಂದು (ನಾಳೆ) ಬೆಳಿಗ್ಗೆ ೧೦ ಗಂಟೆಗೆ ಸೋಮವಾರಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾ. ೧೪ರಂದು ಬೆಳಿಗ್ಗೆ ೧೦ ಗಂಟೆಗೆ ಬಾಣಾವರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತಾಲೂಕು ಕಚೇರಿಯಲ್ಲಿರುವ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ೧೩೩ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.