ಮಡಿಕೇರಿ, ಏ. ೧೨: ವಿಶ್ವ ಆರೋಗ್ಯ ದಿನದ ಪ್ರಯುಕ್ತ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನಗರದ ರಾಜಸೀಟ್ ಮುಂಭಾಗದಲ್ಲಿ ಬೀದಿ ನಾಟಕ ನಡೆಯಿತು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ವಿಶಾಲ್ ಕುಮಾರ್, ಪ್ರಾಂಶುಪಾಲ ಡಾ. ನರಸಿಂಹ ರೈ, ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ನಂಜುAಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಹಾಜರಿದ್ದರು.
ಬೀದಿ ನಾಟಕವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲನೆಯ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ಕಿವಿ, ಮೂಗು ಗಂಟಲಿನ ವಿಭಾಗದ ಮುಖ್ಯಸ್ಥರಾದ ಡಾ. ಶ್ವೇತ ಅವರು ಸಂಯೋಜಿಸಿದರು.