ಮಡಿಕೇರಿ, ಏ. ೧೨ : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳು ತಾ.೧೪ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ವಿಚಾರ ತಿಳಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ; ಚುನಾವಣೆ ಸಂಬAಧ ತಾ. ೧೪ರಂದು ಜಿಲ್ಲೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಸೇರಿದಂತೆ ಸಚಿವ ಸಂಪುಟ ಸಚಿವರುಗಳಾದ ಮಹದೇವಪ್ಪ, ಬೋಸರಾಜು, ವೆಂಕಟೇಶ್, ಇತರ ಹಿರಿಯ ನಾಯಕರುಗಳು ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷö್ಮಣ್ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು. ಉತ್ತಮ ಕಾರ್ಯಕ್ರಮಗಳೊಂದಿಗೆ ಉತ್ತಮ ಆಡಳಿತ ನೀಡಿರುವ ಸರಕಾರ ಎಂದು ರಾಜ್ಯದ ಜನತೆಯಿಂದ ಮೆಚ್ಚುಗೆ ಪಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಜನತೆ ಕಾಂಗ್ರೆಸ್‌ನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಪಕ್ಷದ ಮಾಧ್ಯಮ ಸಂಹವನ ವಕ್ತಾರ ಟಿ.ಪಿ.ರಮೇಶ್ ಮಾತನಾಡಿ; ಜಿಲ್ಲೆ ಸೇರಿದಂತೆ ರಾಜ್ಯದ ಮತದಾರರ ನಿರೀಕ್ಷೆ ಕಾಂಗ್ರೆಸ್ ಪಕ್ಷದ ಪರವಾಗಿದೆ. ಕಳೆದ ಒಂಭತ್ತು ತಿಂಗಳ ಅವಧಿಯಲ್ಲಿ ಈರ್ವರು ಶಾಸಕರು ರೂ.೫೦೦ ಕೋಟಿ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಇದೀಗ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ೨೫ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಿದೆ. ಈ ಎಲ್ಲ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ನೀಡಲಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೊಜನೆಗಳ ಫಲಾನುಭವಿಗಳು ಸಂತೋಷದಿAದ ಕಾಂಗ್ರೆಸ್‌ಗೆ ಮತ ನೀಡಲು ತಯಾರಾಗಿದ್ದಾರೆ. ಇದರಲ್ಲಿ ಬಿಜೆಪಿ ಸೇರಿದಂತೆ ಎಲ್ಲ ಪಕ್ಷದವರೂ ಇದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಯೋಜನೆಯನ್ನು ಪಡೆದುಕೊಂಡ ಋಣ ತೀರಿಸಲು ಕಾಂಗ್ರೆಸ್‌ಗೆ ಆಶೀರ್ವಾದ ಮಾಡಲಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ಮಡಿಕೇರಿ ನಗರ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಪವಿನ್ ಕುಮಾರ್ ಇದ್ದರು.