ಗುಡ್ಡೆಹೊಸೂರು, ಏ. ೧೨: ಇಲ್ಲಿಗೆ ಸಮೀಪದ ಬಾಳುಗೋಡುವಿನ ಶ್ರೀ ಬಸವೇಶ್ವರ ದೇವರ ವಾರ್ಷಿಕ ಮಹಾಪೂಜೆ ನಡೆಯಿತು. ಕಾವೇರಿ ನದಿಯಲ್ಲಿ ಕಲಶಪೂಜೆ ನೆರವೇರಿಸಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕೊಂಡೊಯ್ದು ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು. ಪೂಜಾ ಕಾರ್ಯವನ್ನು ಗುಡ್ಡೆಹೊಸೂರಿನ ಅರ್ಚಕ ರಾಜಯ್ಯ ನಡೆಸಿದರು. ರಸಲ್‌ಪುರ, ಬಾಳುಗೋಡು ಮತ್ತು ಸುತ್ತಮುತ್ತಲಿನ ಹಲವಾರು ಗ್ರಾಮದ ಗ್ರಾಮಸ್ಥರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯ ನಡೆಸಲಾಯಿತು. ಈ ಸಂದರ್ಭ ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.