ವೀರಾಜಪೇಟೆ: ವೀರಾಜಪೇಟೆ ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆಯನ್ನು ವೀರಾಜಪೇಟೆ ಪುರಸಭೆಯಲ್ಲಿ ಆಚರಿಸಲಾಯಿತು.
ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ವೀರಾಜಪೇಟೆ ತಹಶೀಲ್ದಾರ್ ರಾಮಚಂದ್ರ ಹೆಚ್.ಎನ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಅಸ್ಪöÈಶ್ಯತೆ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕ ಜಗಜೀವನ ರಾಮ್ ೧೧೭ನೇ ಜಯಂತೋತ್ಸವವನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ೧೯೩೫ರಲ್ಲಿ ದಲಿತರ ಸಮಾನತೆಗಾಗಿ ಹೋರಾಡುವ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದ ಅಖಿಲ ಭಾರತ ದಮನಿತ ವರ್ಗಗಳ ಒಕ್ಕೂಟವನ್ನು ಸ್ಥಾಪಿಸುವಲ್ಲಿ ಜಗಜೀವನ್ರಾಮ್ ಅವರು ನಿರ್ವಹಿಸಿದ ಪಾತ್ರ ಮಹತ್ವದಾಗಿತ್ತು ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ. ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ಕಾರ್ಮಿಕ ಕಲ್ಯಾಣ ಇಲಾಖೆಯ ನಿರೀಕ್ಷಕ ನಿಖಿಲ್ ಚಂದ್ರ ಪಿ.ಎಂ. ಉಪಸ್ಥಿತರಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರೀತಿ ಚಿಕ್ಕಮಾದಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು ಹಾಜರಿದ್ದರು.
ಸೋಮವಾರಪೇಟೆ: ಸಮಾನತೆಯ ಸಮಾಜ ನಿರ್ಮಾಣಗೊಳ್ಳುವಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಕೊಡುಗೆ ಅಪಾರ ಎಂದು ತಹಶೀಲ್ದಾರ್ ನವೀನ್ ಕುಮಾರ್ ಅಭಿಪ್ರಾಯಿಸಿದರು.
ತಾಲೂಕು ಆಡಳಿತ, ರಾಷ್ಟಿçÃಯ ಹಬ್ಬಗಳ ಸಮಿತಿ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಗಜೀವನ್ರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ದೇಶಕ್ಕೆ ಅವರು ನೀಡಿದ ಸೇವೆಯನ್ನು ತಹಶೀಲ್ದಾರ್ ಸ್ಮರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕ ಸಿದ್ದೇಗೌಡ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕ್ಯಾನಾಯಕ್, ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಸಿಬ್ಬಂದಿಗಳು, ದಲಿತಪರ ಸಂಘಟನೆಯ ಮುಖಂಡರುಗಳು ಉಪಸ್ಥಿತರಿದ್ದರು.