ಮಡಿಕೇರಿ, ಏ.೧೧ : ಕೊಡವರ ಹೊಸ ವರ್ಷಾಚರಣೆ ಎಡಮ್ಯಾರ್ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಏ.೧೪ ರಂದು ಗೋಣಿಕೊಪ್ಪಲಿನಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಎಡಮ್ಯಾರ್ ಒಂದನ್ನು ಸಿಎನ್ಸಿ ಸಂಘಟನೆ ಪ್ರತಿವರ್ಷ ಸಾರ್ವತ್ರಿಕವಾಗಿ ಆಚರಿಸಿಕೊಂಡು ಬರುತ್ತಿದ್ದು, ಇದು ೩೦ನೇ ವರ್ಷದ ಕಾರ್ಯಕ್ರಮವಾಗಿದೆ. ತಾ.೧೪ ರಂದು ಸಂಜೆ ೬.೩೦ ಗಂಟೆಗೆ ಗೋಣಿಕೊಪ್ಪಲಿನ ಶ್ರೀ ಉಮಾಮಹೇಶ್ವರಿ ದೇವಾಲಯದ ಬಳಿಯಿಂದ ದುಡಿಕೊಟ್ಟ್ ಪಾಟ್ನೊಂದಿಗೆ ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಂಜಿನ ಮೆರವಣಿಗೆ ಸಾಗಿ ಆರ್ಎಂಸಿ ಯಾರ್ಡ್ನಲ್ಲಿ ಕೊನೆಗೊಳ್ಳಲಿದೆ. ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗ ಕೊಡವರ ಹಕ್ಕುಗಳ ಕುರಿತು ಕಾರ್ಯಕ್ರಮದಲ್ಲಿ ಪ್ರತಿಪಾದನೆ ಮಾಡುವ ಮೂಲಕ ಆಡಳಿತ ವ್ಯವಸ್ಥೆಯ ಗಮನ ಸೆಳೆಯಲಾಗುವುದು. ರಾಜ್ಯಾಂಗದತ್ತ ಹಕ್ಕೊತ್ತಾಯಗಳನ್ನು ಪ್ರಚುರಪಡಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.
ಇದಕ್ಕೂ ಮೊದಲು ಅಂದು ಬೆಳಗ್ಗೆ ೬ ಗಂಟೆಗೆ ಮದೆನಾಡಿನ ಬೆಟ್ಟತ್ತೂರು ಗ್ರಾಮದಲ್ಲಿ ಕೂಪದಿರÀ ಒಕ್ಕದ ಮೋಹನ್ ಅವರ ಭೂಮಿಯಲ್ಲಿ ಗದ್ದೆ ಉಳುಮೆ ಮಾಡುವ ಮೂಲಕ ಎಡಮ್ಯಾರ್ ಆಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹಬ್ಬವು ವಸಂತಋತು ಫೆ.೧೫ ರಿಂದ ಕೊಡವ ಬುಡಕಟ್ಟಿನ ಹೊಸ ವರ್ಷ ಎಂದರೆ ಸೌರಮಾನ ಕ್ಯಾಲೆಂಡರ್ ಮೂಲಭೂತವಾಗಿ ಎಡಮ್ಯಾರ್ ೧ ಗ್ರೆಗೋರಿಯನ್ ಕ್ಯಾಲೆಂಡರ್ನೊAದಿಗೆ ಹೊಂದಿಕೆಯಾಗುತ್ತದೆ. ಇದು ಕೊಡವ ಬುಡಕಟ್ಟು ಜನಾಂಗದವರ ಕೃಷಿ ಚಟುವಟಿಕೆಗಳ ಆರಂಭವನ್ನು ಸೂಚಿಸುತ್ತದೆ. ಆದ್ದರಿಂದ ಪ್ರಕೃತಿಯನ್ನು ಆರಾಧಿಸುವ ಕೊಡವರು ಅತಿ ಉತ್ಸಾಹದಿಂದ ಆಚರಿಸಿ ಭೂದೇವಿಗೆ ನಮಿಸುತ್ತಾರೆ. ಈ ಜನಪದೀಯ ಬುಡಕಟ್ಟು ಆಚರಣೆ ಇಡೀ ವಿಶ್ವಕ್ಕೆ ಪರಿಚಯವಾಗಬೇಕು ಎನ್ನುವ ಉದ್ದೇಶದಿಂದ ಸಿಎನ್ಸಿ ಸಂಘಟನೆ ಪ್ರತಿವರ್ಷ ಸಾರ್ವಜನಿಕವಾಗಿ ಇದನ್ನು ಆಚರಿಸುತ್ತಿದೆ ಎಂದು ಎನ್.ಯು. ನಾಚಪ್ಪ ತಿಳಿಸಿದ್ದಾರೆ.