ಮಡಿಕೇರಿ, ಏ. ೧೧: ತೀವ್ರ ಹಲ್ಲೆಗೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಹಲ್ಲೆ ಮಾಡಿದ್ದ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ಮಾವ ಮಾದು (೪೫) ಅವರ ಮೇಲೆ ಅಳಿಯ ಮಣಿ (ಅಣ್ಣಪ್ಪ-೩೦) ಹಲ್ಲೆ ಮಾಡಿದ್ದ. ಇದರಿಂದ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಮಾದು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಘಟನೆ ಹಿನ್ನೆಲೆ : ಮಾದು ಅವರ ಮಗಳನ್ನು ಆರೋಪಿ ಮಣಿ ವಿವಾಹವಾಗಿದ್ದು, ಅಮ್ಮತ್ತಿ ಗ್ರಾಮದ ಮಧು ಎಂಬವರ ಲೈನ್ಮನೆಯಲ್ಲಿ ಪ್ರತ್ಯೇಕವಾಗಿ ಎರಡು ಕುಟುಂಬಗಳು ವಾಸವಿದ್ದವು. ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಮಾ. ೧೮ ರಂದು ಕ್ಷÄಲಕ ಕಾರಣಕ್ಕೆ ಮಾವ-ಅಳಿಯನ ನಡುವೆ ವಾಗ್ವಾದ ಏರ್ಪಟ್ಟಿದೆ. ಇದು ವಿಕೋಪಕ್ಕೆ ತಿರುಗಿ ಸೌದೆಯನ್ನು ಮಾದು ಮೇಲೆ ಎಸೆದಿದ್ದಾನೆ. ಇದು ತಲೆಯ ಭಾಗಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿ ಬಿದಿದ್ದು, ತಕ್ಷಣ ಗಾಯಾಳುವನ್ನು ಅಮ್ಮತ್ತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆ, ಮಡಿಕೇರಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆ ದಾಖಲಿಸಲಾಯಿತು. ಆದರೆ, ಗಂಭೀರ ಸ್ಥಿತಿಯಲ್ಲಿದ್ದ ಕಾರಣ ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ರಾತ್ರಿ ಮಾದು ಕೊನೆಯುಸಿರೆಳೆದ್ದಾರೆ.
ಈ ಸಂಬAಧ ವೀರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡೆದ ದಿನದಂದು ಪ್ರಕರಣ ದಾಖಲಾಗಿತ್ತು. ವ್ಯಕ್ತಿ ಮೃತಪಟ್ಟ ಹಿನ್ನೆಲೆ ಮಣಿಯನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದು, ಮೃತದೇಹವನ್ನು ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆಗೆ ಮುಂದಾದಾಗ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ ಹಿನ್ನೆಲೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.