ಮಡಿಕೇರಿ, ಏ. ೧೨: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇದುವರೆಗೂ ಪೊಲೀಸ್ ಹಾಗೂ ಅಬಕಾರಿ ಇಲಾಖೆಯಿಂದ ಒಟ್ಟು ೨೬೮ ಪ್ರಕರಣಗಳು ದಾಖಲಾಗಿವೆ ಎಂದು ಚುನಾವಣಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ವರ್ಣಿತ್ ನೇಗಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಾ. ೧೬ ರಿಂದ ದಿನಾಂಕ ತಾ. ೧೨ ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಅಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆ ತಪಾಸಣೆ ವೇಳೆ ಪತ್ತೆಹಚ್ಚಿದ ಪ್ರಕರಣಗಳಿಗೆ ಎಫ್.ಐ.ಆರ್. ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಮರ್ಪಕ ದಾಖಲೆಗಳು ಇಲ್ಲದೆ ಸಾಗಿಸುತ್ತಿದ್ದ
೨೬೮ ಎಫ್.ಐ.ಆರ್.ಗಳು ದಾಖಲು!
(ಮೊದಲ ಪುಟದಿಂದ) ರೂ.೬೨,೪೧,೧೯೯ ಮೌಲ್ಯದ ಒಟ್ಟು ೨೮,೦೯೪.೨೯೫ ಲೀಟರ್ಗಳ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರೂ. ೩೮ ಸಾವಿರ ಮೌಲ್ಯದ ಒಟ್ಟು ೧.೬೪೭ ಕೆ.ಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.೧೬,೫೪,೨೨೦ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸ್ ಇಲಾಖೆಯಿಂದ ೨೯ ಎಫ್.ಐ.ಆರ್.ಗಳು ಹಾಗೂ ಅಬಕಾರಿ ಇಲಾಖೆಯಿಂದ ಒಟ್ಟು ೨೩೯ ಎಫ್.ಐ.ಆರ್.ಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.