ಮಡಿಕೇರಿ, ಏ. ೧೩: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ವತಿಯಿಂದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷö್ಮಣ್ಗೌಡ ಅವರಿಗೆ ಬೆಂಬಲ ನೀಡುವುದಾಗಿ ಸಮಿತಿಯ ಪ್ರಮುಖರು ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ ಕರೆಯ ಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಸಂಸ ಸಂಚಾಲಕ ಹೆಚ್.ಎಲ್. ದಿವಾಕರ್ ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸಮಿತಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿತ್ತು. ಜಿಲ್ಲೆಯಲ್ಲಿ ಗೆದ್ದ ಇಬ್ಬರೂ ಕಾಂಗ್ರೆಸ್ ಶಾಸಕರುಗಳು ಜನಾನುರಾಗಿಗಳಾಗಿದ್ದು, ಸಮಿತಿಯ ಬೇಡಿಕೆಗಳಿಗೂ ಸ್ಪಂದಿಸುತ್ತಾರೆ. ಇದೀಗ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅನ್ನು ಬೆಂಬಲಿಸುವAತೆ ದಸಂಸ ರಾಜ್ಯ ನಾಯಕರಿಂದ ಸೂಚನೆ ಬಂದಿದ್ದು, ಅದರಂತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲಾಗುವು ದೆಂದರು. ಗ್ರಾಮ ಗ್ರಾಮಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು. ಸಮಿತಿಯ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಗಳಿಂದ ಜನಸಾಮಾನ್ಯರಿಗೆ ನೆರವಾಗಿದೆ ಎಂದರು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲಕ್ಕೆ ನಿಲ್ಲುವುದಾಗಿ ತಿಳಿಸಿದರು.
ಗೋಷ್ಠಿಯಲ್ಲಿ ಸಮಿತಿಯ ಪೊನ್ನಂಪೇಟೆ ತಾಲೂಕು ಸಂಚಾಲಕ ಹೆಚ್.ಆರ್. ಜಗದೀಶ್, ಸಂಘಟನಾ ಸಂಚಾಲಕ ಹೆಚ್.ಆರ್. ಶ್ರೀಕಂಠಯ್ಯ ಉಪಸ್ಥಿತರಿದ್ದರು.