ಮಡಿಕೇರಿ, ಏ. ೧೨ : ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿAದ ಸಂಸ್ಥೆಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಯೋಜನೆ ರೂಪಿಸಿದ್ದು, ಈ ಸಂಬAಧ ಪ್ರವೇಶ ಪರೀಕ್ಷೆ ಏರ್ಪಡಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾಸಂಸ್ಥೆಯ ಮಾಧ್ಯಮ ವಕ್ತಾರ ಪ್ರಸಾದ್ ಶೆಟ್ಟಿ; ಕಳೆದ ನಾಲ್ಕು ದಶಕಗಳಿಂದ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ವಿದ್ಯಾರ್ಥಿ ವೇತನ ನೀಡುತ್ತಾ ಪ್ರೋತ್ಸಾಹಿಸುತ್ತಾ ಬರುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಎರಡು ವರ್ಷಗಳಿಗೆ ರೂÄ.೧೦ ಕೋಟಿಯಷ್ಟು ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ೧೦ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಂಸ್ಥೆಗೆ ಸೇರಬಯಸುವವರು ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದಾಗಿದೆ. ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು. ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು ೧೨೦ ನಿಮಿಷಗಳ ಕಾಲ ಆಂಗ್ಲ ಭಾಷೆಯಲ್ಲಿ ಪರೀಕ್ಷೆ ನಡೆಯಲಿದೆ. ತಾ.೧೪ ಹಾಗೂ ೨೦ರಂದು ಆಳ್ವಾಸ್ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವದಾದರೂ ಒಂದು ದಿನ ಆಗಮಿಸಿ ಪರೀಕ್ಷೆ ಬರೆಯಬಹುದಾಗಿದೆ. ಅಗತ್ಯವಿರುವವರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗುವದೆಂದು ತಿಳಿಸಿದರು.

ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜೊತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ೧೦ನೇ ತರಗತಿ ಅಂಕ ಪರಿಗಣಿಸಿಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೆಯೂ ಆಯ್ಕೆ ನಡೆಯುತ್ತದೆ. ಪರೀಕ್ಷೆಯ ದಿನ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು hಣಣಠಿs://sಛಿhoಟಚಿಡಿshiಠಿ.ಚಿಟvಚಿs.oಡಿg/ಠಿuಛಿ/ಟogiಟಿ.ಠಿhಠಿ

ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.೮೮೮೪೪೭೭೫೮೮, ೬೩೬೬೩೭೭೮೨೭, ೬೩೬೬೩೭೭೮೨೩ ಸಂಪರ್ಕಿಸಬಹುದೆAದು ಅವರು ತಿಳಿಸಿದರು. ಗೋಷ್ಠಿಯಲ್ಲಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಅರುಣ್‌ಕುಮಾರ್ ಇದ್ದರು.