ಚೆಯ್ಯಂಡಾಣೆ, ಏ. ೧೩: ನಾಪೋಕ್ಲುವಿನಲ್ಲಿ ಶುಕ್ರವಾರ ಸುರಿದ ಮಳೆಗೆ ನಾಪೋಕ್ಲು ಗ್ರಾಮ ಪಂಚಾಯಿತಿಗೆ ಬೇತು ಗ್ರಾಮದ ಮನೆಯ ಮೇಲ್ಚಾವಣಿ ಕುಸಿದಿದೆ. ದೈನಬಾ ಎಂಬವರ ಅಡುಗೆ ಮನೆ ಮತ್ತು ಶೌಚಾಲಯದ ಮೇಲ್ಛಾವಣಿ ಮಳೆಗೆ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಾಪೋಕ್ಲು ಗ್ರಾಮ ಲೆಕ್ಕಿಗೆ ಅಮೃತ, ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬ ತಿಮ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.