ಶಾಸಕ ಎ.ಎಸ್. ಪೊನ್ನಣ್ಣ
ಸಿದ್ದಾಪುರ, ಏ. ೧೨: ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ೯ನೇ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಸಿದ್ದಾಪುರ ಸ್ವರ್ಣಮಾಲಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟನೆ ಮಾಡಿ ಮಾತನಾಡಿ, ಜಿಲ್ಲೆಯಲ್ಲಿ ತಮಿಳು ಸಮುದಾಯದವರು ತಮ್ಮದೇ ಆದ ಆಚಾರ, ವಿಚಾರ, ಸಂಸ್ಕೃತಿ, ಪರಂಪರೆಯೊAದಿಗೆ ಜೀವನ ನಡೆಸುತ್ತಿದ್ದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಮಿಳು ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನ ವಹಿಸಿ ಕಡ್ಡಾಯವಾಗಿ ಶಾಲೆಗೆ ಕಳುಹಿಸುವ ಮೂಲಕ ಶಿಕ್ಷಣ ನೀಡಿ ಸಮಾಜದ ಮುಖ್ಯ ವಾಹಿನಿಗೆ ತರಬೇಕೆಂದರು. ಸರ್ಕಾರದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜು ಸುಬ್ರಮಣಿ ಮಾತನಾಡಿ, ಜಿಲ್ಲೆಯಲ್ಲಿ ಕಾವೇರಿ ತಮಿಳು ಸಂಘ ಕಳೆದ ೯ ವರ್ಷಗಳಿಂದ ಶಿಕ್ಷಣ, ಆರೋಗ್ಯ, ಸಮಾಜ ಸೇವೆಯೊಂದಿಗೆ ಮುನ್ನಡೆ ಯುತ್ತಿದ್ದು ಸಮಾಜ ಬಾಂಧವರನ್ನು ಒಗ್ಗೂಡಿಸಿ ಸಂಸ್ಕೃತಿಯನ್ನು ಪ್ರತಿಬಿಂಬಿಸುವುದರ ಮೂಲಕ ಒಗ್ಗಟ್ಟಿನೊಂದಿಗೆ ಮುನ್ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು, ಶಾಲಾ ಶಿಕ್ಷಕರು, ಸಮಾಜ ಸೇವಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ವಾರ್ಷಿಕೋತ್ಸವ ಅಂಗವಾಗಿ ಸಂಗೀತ, ನೃತ್ಯ, ಗೀತ ಗಾಯನ, ಮ್ಯಾಜಿಕ್ ಶೋ, ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ಜಿಲ್ಲೆ ಹಾಗೂ ಹೊರ ಜಿಲ್ಲೆಯ ತಮಿಳು ಸಂಘಟನೆಯ ಪ್ರಮುಖರು ಪಾಲ್ಗೊಂಡಿದ್ದರು. ಕಾವೇರಿ ತಮಿಳು ಸಂಘದ ಅಧ್ಯಕ್ಷ ಮೈಕಲ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರ ಡಾ. ಎ.ಸಿ. ಗಣಪತಿ, ಕೆ.ಸಿ. ಉತ್ತಪ್ಪ, ಎಂ.ಎA. ಕಾಳಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಸರ್, ಪಳನಿ ಸ್ವಾಮಿ, ರೀನಾ ತುಳಸಿ, ಶಿಕ್ಷಕ ಶಿವರಾಜು, ಭಾಷಾ ಅಲ್ಪಸಂಖ್ಯಾತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರತೀಕ್ ಪೊನ್ನಣ್ಣ, ದಿನಕರಣ್ ಸಂಪಾದಕ ಕುತುಬುದ್ದೀನ್, ಕಾವೇರಿ ತಮಿಳು ಸಂಘದ ಉಪಾಧ್ಯಕ್ಷರುಗಳಾದ ನಾಗರಾಜ್, ಕಣ್ಣನ್, ಕಾರ್ಯದರ್ಶಿ ಕುಮಾರ್, ಸಹ ಕಾರ್ಯದರ್ಶಿ ಗಣೇಶ್, ಖಜಾಂಚಿ ಮುತ್ತು ವೇಲ್, ಲೆಕ್ಕ ಪರಿಶೋಧಕ ಶೇಖರ್ ಸೇರಿದಂತೆ ಸಮಿತಿಯ ಪ್ರಮುಖರು ಹಾಜರಿದ್ದರು.