ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಆರೋಗ್ಯಕ್ಕಾಗಿ ನಡಿಗೆಸೋಮವಾರಪೇಟೆ, ಏ. ೧೩: ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಇಲ್ಲಿನ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಆರೋಗ್ಯಕ್ಕಾಗಿ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಸದಸ್ಯರು ಮತ್ತು ಸಿ.ಕೆ. ಆರ್ಮಿ ಟ್ರೆöÊನಿಂಗ್ ಸಂಸ್ಥೆಯ ವಿದ್ಯಾರ್ಥಿಗಳು ಪಟ್ಟಣದಿಂದ ಚೌಡ್ಲು ಬೆಟ್ಟದವರೆಗೆ ಕಾಲ್ನಡಿಗೆಯಲ್ಲಿ ತೆರಳಿದರು. ವಿಶ್ವ ಆರೋಗ್ಯ ದಿನಾಚರಣೆಯ ಬಗ್ಗೆ ಜಾಗೃತಿ ಮೂಡಿಸಿದರು. ಚೌಡ್ಲು ಬೆಟ್ಟದ ಮೇಲೆ ಲಘು ವ್ಯಾಯಾಮ, ಯೋಗ, ಪ್ರಾಣಾಯಾಮ, ಧ್ಯಾನ ಮಾಡಲಾಯಿತು. ಆರ್ಟ್ ಆಫ್ ಲಿವಿಂಗ್ನ ಶಿಕ್ಷಕಿ ರಾಗಿಣಿ ಆರೋಗ್ಯದ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಸಿ.ಕೆ. ಆರ್ಮಿ ಟ್ರೆöÊನಿಂಗ್ ಸಂಸ್ಥೆಯ ಚಂದ್ರಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.