ಕೂಡಿಗೆ, ಏ. ೧೩: ರಾಜ್ಯ ಸರಕಾರವು ಜಾರಿಗೆ ತಂದಿರುವ ಎಲ್ಲಾ ಗ್ಯಾರಂಟಿ ಯೋಜನೆ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಸಮಗ್ರವಾಗಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮಾಹಿತಿಯನ್ನು ತಿಳಿಸುವ ಕೆಲಸವನ್ನು ಮಾಡಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ, ಮಂತರ್ ಗೌಡ ಹೇಳಿದರು. ಅವರು ಕೂಡಿಗೆಯಲ್ಲಿ ನಡೆದ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷö್ಮಣ್ ಅವರ ಪರ ಚುನಾವಣಾ ಪ್ರಚಾರದ ಸಭೆಯಲ್ಲಿ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯ, ಬಸವನಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಅರುಣ್ ರಾವ್ ವಹಿಸಿದ್ದರು.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷö್ಮಣ್ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಗೆಲುವು ಸಾಧಿಸಲು ಸಾಧ್ಯ ಎಂದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್, ವಕೀಲರಾದ ಚಂದ್ರಮೌಳಿ, ಕೆ.ಪಿ. ಚಂದ್ರಕಲಾ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ ಸದಸ್ಯರಾದ ಮಂಜುನಾಥ ಗುಂಡುರಾವ್, ನಟೇಶ್ ಗೌಡ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಅನಂತ, ಶಿವಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಹಾಜರಿದ್ದರು.
ರಮೇಶ್, ವಕೀಲರಾದ ಚಂದ್ರಮೌಳಿ, ಕೆ.ಪಿ. ಚಂದ್ರಕಲಾ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ ಸದಸ್ಯರಾದ ಮಂಜುನಾಥ ಗುಂಡುರಾವ್, ನಟೇಶ್ ಗೌಡ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ರಾವ್, ಅನಂತ, ಶಿವಕುಮಾರ್ ಸೇರಿದಂತೆ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರು ಹಾಜರಿದ್ದರು.