ಮಡಿಕೇರಿ, ಏ. ೧೩: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಾಪಂಡ ಮುತ್ತಪ್ಪ ಮರಳಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊAದಿಗೆ ಪಕ್ಷ ಸೇರ್ಪಡೆಗೊಂಡರು. ಈ ಸಂದರ್ಭ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಕಾಂಗ್ರೆಸ್ ಮುಖಂಡ ಹೆಚ್.ಎಸ್. ಚಂದ್ರಮೌಳಿ ಸೇರಿದಂತೆ ಇನ್ನಿತರರು ಹಾಜರಿದ್ದರು.